ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ತಂಡವು ಗುರುವಾರ ತಡರಾತ್ರಿ ಘಾಟ್ಕೋಪರ್ ಹೋರ್ಡಿಂಗ್ ಕುಸಿತ ಪ್ರಕರಣದ ಆರೋಪಿ ಭವೇಶ್ ಭಿಂಡೆ (ಕಪ್ಪು ಬಟ್ಟೆಯಲ್ಲಿ) ಯನ್ನು ಉದಯಪುರದಲ್ಲಿ ಬಂಧಿಸಿ ಮುಂಬೈ ವಿಮಾನ ನಿಲ್ದಾಣಕ್ಕೆ ಕರೆತಂದರು. 
ದೇಶ

ಘಾಟ್ಕೋಪರ್ ಹೋರ್ಡಿಂಗ್ ಕುಸಿತ: ರಾಜಸ್ಥಾನದ ಉದಯಪುರದಲ್ಲಿ ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆತಂದ ಪೊಲೀಸರು

ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ 16 ಜನರ ಸಾವಿಗೆ ಕಾರಣವಾದ ದೈತ್ಯ ಹೋರ್ಡಿಂಗ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಶುಕ್ರವಾರ ಮುಂಜಾನೆ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ 16 ಜನರ ಸಾವಿಗೆ ಕಾರಣವಾದ ದೈತ್ಯ ಹೋರ್ಡಿಂಗ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಶುಕ್ರವಾರ ಮುಂಜಾನೆ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ಸಂಜೆ ಉಪನಗರ ಘಾಟ್ಕೋಪರ್‌ನಲ್ಲಿ ಕುಸಿದ ಜಾಹೀರಾತು ಫಲಕವನ್ನು ಇತ್ತೀಚೆಗೆ ಅಳವಡಿಸಿದ್ದ M/s Ego Media Pvt.Ltd ಜಾಹೀರಾತು ಸಂಸ್ಥೆಯ ನಿರ್ದೇಶಕ ಭವೇಶ್ ಭಿಂಡೆ ಅವರನ್ನು ಗುರುವಾರ ರಾಜಸ್ಥಾನದ ಉದಯಪುರದಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ನಂತರ ಭಿಂಡೆ ಅವರನ್ನು ಅಹಮದಾಬಾದ್‌ಗೆ ಕರೆದೊಯ್ದು ಅಲ್ಲಿಂದ ವಿಮಾನದ ಮೂಲಕ ಮುಂಬೈಗೆ ಕರೆತರಲಾಯಿತು. ಭಿಂಡೆ ಅವರೊಂದಿಗೆ ಪೊಲೀಸ್ ತಂಡವು ಮುಂಜಾನೆ 5 ಗಂಟೆಗೆ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು ಮತ್ತು ಅವರನ್ನು ಅಪರಾಧ ವಿಭಾಗದ ಕಚೇರಿಗೆ ಕರೆದೊಯ್ಯಲಾಗಿದ್ದು, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿ ಹೇಳಿದರು.

ಮೂರು ದಿನಗಳ ಕಾಲ ಭಿಂಡೆಯನ್ನು ಹಿಂಬಾಲಿಸಿದ ನಂತರ, ನಗರ ಪೊಲೀಸರು ಗುರುವಾರ ಉದಯಪುರದಲ್ಲಿ ಅವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಜೋರಾದ ಗಾಳಿ ಮತ್ತು ಭಾರಿ ಮಳೆಯಿಂದಾಗಿ ಘಾಟ್ಕೋಪರ್‌ನ ಛೇದನಗರ ಪ್ರದೇಶದಲ್ಲಿ 120 ಅಡಿ x 120 ಅಡಿಯ ಬೃಹತ್ ಗಾತ್ರದ ಹೋರ್ಡಿಂಗ್ ಪೆಟ್ರೋಲ್ ಬಂಕ್ ಮೇಲೆ ಬಿದ್ದಿತ್ತು. ಘಟನೆಯಲ್ಲಿ 16 ಜನರು ಸಾವಿಗೀಡಾಗಿದ್ದರು ಮತ್ತು 75 ಜನರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT