ಬಾರಾಬಂಕಿ: ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಚಲಾಯಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿಶುಕ್ರವಾರ ಹೇಳಿದ್ದಾರೆ.
ಇಂಡಿಯಾ ಬ್ಲಾಕ್ ಮಿತ್ರಪಕ್ಷಗಳ ವಿರುದ್ಧ ತೀಕ್ಷ್ಣವಾದ ವ್ಯಂಗ್ಯವಾಡಿದ ಮೋದಿ, ಬುಲ್ಡೋಜರ್‌ಗಳನ್ನು ಎಲ್ಲಿ ಓಡಿಸಬೇಕೆಂದು ಕಲಿಯಲು ಮಾಜಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಟ್ಯೂಷನ್ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಎಸ್‌ಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಾಮ್ ಲಲ್ಲಾ ಮತ್ತೆ ಟೆಂಟ್‌ನಲ್ಲಿರಬೇಕಾಗುತ್ತದೆ. ಅವರು ರಾಮಮಂದಿರದ ಮೇಲೆ ಬುಲ್ಡೋಜರ್ ಓಡಿಸುತ್ತಾರೆ. ಎಲ್ಲಿ ಬುಲ್ಡೋಜರ್ ಓಡಿಸಬೇಕು ಮತ್ತು ಎಲ್ಲಿ ಓಡಿಸಬಾರದು ಅವರು ಯೋಗಿ ಜಿಯಿಂದ ಟ್ಯೂಷನ್ ತೆಗೆದುಕೊಳ್ಳಬೇಕು ಎಂದು ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರನ್ನು ಅವರ ಬೆಂಬಲಿಗರು ‘ಬುಲ್ಡೋಜರ್ ಬಾಬಾ’ ಎಂದೂ ಕರೆಯುತ್ತಾರೆ, ಏಕೆಂದರೆ ಅವರು ಅಕ್ರಮ ಕಟ್ಟಡಗಳು ಮತ್ತು ಅಪರಾಧಿಗಳು ಮತ್ತು ಗಲಭೆಕೋರರ ಮನೆಗಳನ್ನು ಕೆಡವಿದ್ದಾರೆ.
ಎಸ್‌ಪಿ-ಕಾಂಗ್ರೆಸ್ ನಾಯಕರು ಅಯೋಧ್ಯೆ ರಾಮಮಂದಿರದ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಬದಲಾಯಿಸಲು ಬಯಸುತ್ತಿದ್ದಾರೆ. ರಾಮಮಂದಿರ ನಿಷ್ಪ್ರಯೋಜಕ ಎಂದು ಹೇಳುವ ಅಂತಹ ನಾಯಕರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ಇಂಡಿಯಾ’ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ ನೀಡುವ ಹೇಳಿಕೆಯನ್ನು ಉಲ್ಲೇಖಿಸಿದ ಮೋದಿ, ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಮುಗಿದ ಬೆನ್ನಲ್ಲೇ ಮೈತ್ರಿಕೂಟದಲ್ಲಿ ಒಡಕು ಮೂಡುವ ಲಕ್ಷಣಗಳನ್ನು ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
‘ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿರುವಾಗಲೇ ‘ಇಂಡಿಯಾ’ ಮೈತ್ರಿಕೂಟ ಪತನವಾಗುವ ಲಕ್ಷಣಗಳು ಕಾಣಿಸುತ್ತಿವೆ. ‘ಶಹಜಾದ’ (ರಾಹುಲ್ ಗಾಂಧಿ) ಈಗಾಗಲೇ ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದೇಶಕ್ಕೆ ಹಾರಲಿದ್ದಾರೆ’ ಎಂದು ಮೋದಿ ಲೇವಡಿ ಮಾಡಿದ್ದಾರೆ.