ಸ್ವಾತಿ ಮಲಿವಾಲ್ 
ದೇಶ

ಇದು ಸ್ವಾತಿ ಮಲಿವಾಲ್ ಸತ್ಯ: ವಿಡಿಯೋಗೆ ಎಎಪಿ ಪ್ರತಿಕ್ರಿಯೆ; ಕಾಪಾಡಿಕೊಳ್ಳಲು 'ರಾಜಕೀಯ ಹಿಟ್‌ಮ್ಯಾನ್' ಯತ್ನ ಎಂದ ಆಪ್ ಸಂಸದೆ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದೊಳಗಿನ ಸಿಸಿಟಿವಿ ದೃಶ್ಯಗಳ ವಿಡಿಯೋವನ್ನು ಆಮ್ ಆದ್ಮಿ ಪಕ್ಷ ಮರುಟ್ವೀಟ್ ಮಾಡಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದೊಳಗಿನ ಸಿಸಿಟಿವಿ ದೃಶ್ಯಗಳ ವಿಡಿಯೋವನ್ನು ಆಮ್ ಆದ್ಮಿ ಪಕ್ಷ ಮರುಟ್ವೀಟ್ ಮಾಡಿದೆ. ಅದರಲ್ಲಿ ಆಪ್ ಸಂಸದೆ ಸ್ವಾತಿ ಮಲಿವಾಲ್ ಅವರು ತಮ್ಮನ್ನು ಮುಟ್ಟಿದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ವಿಡಿಯೋವನ್ನು ಮರುಟ್ವೀಟ್ ಮಾಡಿದ ಎಎಪಿ, "ಇದು ಸ್ವಾತಿ ಮಹಿವಾಲ್ ಅವರ ಸತ್ಯ(ಸ್ವಾತಿ ಮಲಿವಾಲ್ ಕಾ ಸಚ್)" ಎಂದು ಹೇಳಿದೆ.

ಇನ್ನು ಸ್ವಾತಿ ಮಲಿವಾಲ್ ಸಹ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದು, 'ರಾಜಕೀಯ ಹಿಟ್‌ಮ್ಯಾನ್' ತನ್ನನ್ನು ತಾನು ಉಳಿಸಿಕೊಳ್ಳಲು ಪ್ರಯತ್ನ ಪ್ರಾರಂಭಿಸಿದ್ದಾನೆ ಎಂದು ಶುಕ್ರವಾರ ಹೇಳಿದ್ದಾರೆ.

52 ಸೆಕೆಂಡುಗಳ ಈ ವಿಡಿಯೋದಲ್ಲಿ, ಮುಖ್ಯಮಂತ್ರಿ ನಿವಾಸದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಮಲಿವಾಲ್ ವಾಗ್ವಾದ ಮಾಡುತ್ತಿರುವುದು ಕಂಡುಬಂದಿದೆ.

ಸೋಮವಾರ ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಆರೋಪಿಸಿದ್ದರು.

"ಪ್ರತಿ ಬಾರಿಯಂತೆ, ಈ ಬಾರಿಯೂ ಈ ರಾಜಕೀಯ ಹಿಟ್‌ಮ್ಯಾನ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಪ್ರಯತ್ನ ಆರಂಭಿಸಿದ್ದಾನೆ" ಎಂದು ಯಾರ ಹೆಸರನ್ನು ಉಲ್ಲೇಖಿಸದೆ ಸ್ವಾತಿ ಮಲಿವಾಲ್ ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದ್ದಾರೆ.

"ತನ್ನ ಜನರ ಮೂಲಕ ಸರಿಯಾದ ವಿವರ ಇಲ್ಲದ ಈ ವಿಡಿಯೋವನ್ನು ಟ್ವೀಟ್‌ ಮಾಡಿ ತಪ್ಪು ಮಾಡಿಯೂ ತಾನು ಪಾರಾಗಬಹುದು ಎಂದು ಭಾವಿಸಿದ್ದಾನೆ. ಮನೆಯಲ್ಲಿ ಥಳಿಸುವ ವಿಡಿಯೋವನ್ನು ಯಾರಾದರೂ ಮಾಡುತ್ತಾರಾ? ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗಲೇ ಸತ್ಯಾಂಶ ಎಲ್ಲರಿಗೂ ತಿಳಿಯಲಿದೆ. ನೀವು ಯಾವ ಮಟ್ಟಕ್ಕೆ ಇಳಿಯುತ್ತಿದ್ದೀರಿ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ. ಮುಂದೊಂದು ದಿನ ಪ್ರತಿಯೊಬ್ಬರ ಸತ್ಯವೂ ಜಗತ್ತಿನ ಮುಂದೆ ಅನಾವರಣವಾಗಲಿದೆ' ಎಂದು ಮಲಿವಾಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ