ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜ್ಯಪಾಲರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆಗೆ ತಡೆ: ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ FIR

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ಮಹಿಳೆಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ಇಲ್ಲಿನ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Nagaraja AB
Updated On : 18 May 2024, 12:20 pm

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ಮಹಿಳೆಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ಇಲ್ಲಿನ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಜಭವನದ ಗುತ್ತಿಗೆ ಉದ್ಯೋಗಿ ಮಹಿಳೆ ಕಿರುಕುಳ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿದ ನಂತರ ಮೂವರು ಅಧಿಕಾರಿಗಳ ವಿರುದ್ಧ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Also Read

ಪಶ್ಚಿಮ ಬಂಗಾಳ ರಾಜ್ಯಪಾಲ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯ ಕೋರಿ ರಾಷ್ಟ್ರಪತಿಗೆ ಮಹಿಳೆ ಪತ್ರ!

“ಮೇ 2 ರಂದು ರಾಜಭವನದಿಂದ ದೂರವಿರುವ ಮಹಿಳೆಯನ್ನು ತಪ್ಪಾಗಿ ತಡೆದ ಮೂವರು ಅಧಿಕಾರಿಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ. ಅಂದು ಸಂಜೆ ನಡೆದ ಅವರ ಪಾತ್ರದ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

Advertisement

ಮೇ 2 ರಂದು ರಾಜ್ಯಪಾಲ ಬೋಸ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು ನಂತರ ಕೋಲ್ಕತ್ತಾ ಪೊಲೀಸರು ತನಿಖೆ ಪ್ರಾರಂಭಿಸಿದ್ದರು. ಸಂವಿಧಾನದ 361 ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಅಧಿಕಾರಾವಧಿಯಲ್ಲಿ ಅವರ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಗಳನ್ನು ಸ್ಥಾಪಿಸಲಾಗುವುದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement