ಕಂಗನಾ ರಣಾವತ್ 
ದೇಶ

ಚುನಾವಣೆಯಲ್ಲಿ ಗೆದ್ದರೆ Bollywood ತೊರೆಯುತ್ತೇನೆ: ಬಿಜೆಪಿ ಅಭ್ಯರ್ಥಿ Kangana Ranaut

ಹಾಲಿ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಕಂಗನಾ ರಣಾವತ್ ತಾವು ಗೆದ್ದರೆ ಬಾಲಿವುಡ್ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ.

ಶಿಮ್ಲಾ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಕಂಗನಾ ರಣಾವತ್ ತಾವು ಗೆದ್ದರೆ ಬಾಲಿವುಡ್ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ.

ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯಲಿದೆ.

ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿರುವ ಕಂಗನಾ, ಮಹತ್ವದ ಘೋಷಣೆ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂದು ಘೋಷಿಸಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದು, ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ.

ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದಾಗಿ ಹೇಳಿದ್ದಾರೆ.

ಅಂದಹಾಗೆ ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ