ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ನನ್ನು ಶನಿವಾರ ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ವೇಳೆ ಸಿಎಂ ಕೇಜ್ರಿವಾಲ್ ನಿವಾಸದಿಂದ ಕುಮಾರ್ ಅವರನ್ನು ಬಂಧಿಸಲಾಗಿದೆ. ಕಳೆದ ಮೇ 13 ರಂದು ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸದಸ್ಯೆ ಮಲಿವಾಲ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಕುಮಾರ್ ಬಿಭವ್ ಕುಮಾರ್ ವಿರುದ್ಧ ಕೇಸು ದಾಖಲಿಸಿಕೊಂಡಿದ್ದರು.
ಬಿಭವ್ ಕುಮಾರ್ ಮೇಲೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 308 (ಅಪರಾಧೀಯ ನರಹತ್ಯೆ ಮಾಡಲು ಯತ್ನ), 341 (ತಪ್ಪು ಸಂಯಮ), 354 (ಬಿ) (ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವನ್ನು ಬಳಸುವುದು), 506 (ಅಪರಾಧ ಬೆದರಿಕೆ) ಮತ್ತು 509 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಇಂದು ದೆಹಲಿ ಪೊಲೀಸ್ ತಂಡವು ಸಿಎಂ ಕೇಜ್ರಿವಾಲ್ ನಿವಾಸಕ್ಕೆ ಆಗಮಿಸಿ ಬಿಭವ್ ಕುಮಾರ್ ನನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
ಸಿಸಿಟಿವಿ ದೃಶ್ಯ: ಈ ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಿಂದ ಮಲಿವಾಲ್ ಹೊರಹೋಗುತ್ತಿರುವ ಸಿಸಿಟಿವಿ ದೃಶ್ಯಾವಳಿ ಕಂಡುಬಂದಿದೆ, ಮೇ 13 ರಲ್ಲಿ ದಾಖಲಾದ ಸಿಸಿಟಿವಿ ದೃಶ್ಯಾವಳಿ ಇದಾಗಿದ್ದು, ಮಲಿವಾಲ್ ಅವರು ದೆಹಲಿ ಸಿಎಂ ನಿವಾಸದಿಂದ ಹೊರಹೋಗುವಾಗ ಮಹಿಳಾ ಭದ್ರತಾ ಸಿಬ್ಬಂದಿಯೂ ಇರುವುದನ್ನು ತೋರಿಸುತ್ತದೆ.