ಸುಪ್ರೀಂಕೋರ್ಟ್ 
ದೇಶ

ಇವಿಎಂ ಹಾನಿ: ಜೆಡಿಎಸ್ ನಾಯಕನ ವಿರುದ್ಧದ ಪ್ರಕರಣ ರದ್ದತಿ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಕರ್ನಾಟಕ ಸರ್ಕಾರ

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉದ್ರಿಕ್ತ ಗುಂಪೊಂದರಲ್ಲಿ ತೊಡಗಿಸಿಕೊಂಡು ವಿದ್ಯುನ್ಮಾನ ಮತಯಂತ್ರಗಳಿಗೆ (ಇವಿಎಂ) ಹಾನಿ ಮಾಡಿದ್ದಕ್ಕಾಗಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಸಲ್ಲಿಸಿರುವ ಮೇಲ್ಮನವಿಗೆ ಉತ್ತರಿಸುವಂತೆ ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಜೆಡಿ(ಎಸ್) ನಾಯಕ ಬಿಬಿ ಪಾಟೀಲ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉದ್ರಿಕ್ತ ಗುಂಪೊಂದರಲ್ಲಿ ತೊಡಗಿಸಿಕೊಂಡು ವಿದ್ಯುನ್ಮಾನ ಮತಯಂತ್ರಗಳಿಗೆ (ಇವಿಎಂ) ಹಾನಿ ಮಾಡಿದ್ದಕ್ಕಾಗಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಸಲ್ಲಿಸಿರುವ ಮೇಲ್ಮನವಿಗೆ ಉತ್ತರಿಸುವಂತೆ ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಜೆಡಿ(ಎಸ್) ನಾಯಕ ಬಿಬಿ ಪಾಟೀಲ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ಉನ್ನತ ನ್ಯಾಯಾಲಯದ ದ್ವಿಸದಸ್ಯ ಪೀಠವು ಪಾಟೀಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಮತ್ತು ಕರ್ನಾಟಕ ಸರ್ಕಾರದ ಮೇಲ್ಮನವಿಯಲ್ಲಿ ಅವರ ಪ್ರತಿಕ್ರಿಯೆಯನ್ನು ಕೇಳಿದೆ. ಬೇಸಿಗೆ ರಜೆಯ ನಂತರ ಜುಲೈ 7 ರಂದು ಸುಪ್ರೀಂ ಕೋರ್ಟ್ ಈಗ ಪ್ರಕರಣದ ವಿಚಾರಣೆ ನಡೆಸಲಿದೆ.

ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇವಿಎಂಗಳನ್ನು ಹಾನಿಗೊಳಿಸಿದ ಆರೋಪದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರಿದ ನಿವೃತ್ತ ಪೊಲೀಸ್ ಅಧಿಕಾರಿ ಪಾಟೀಲ್ ಆರೋಪಿಯಾಗಿರುವುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ. ಆರಂಭದಲ್ಲಿ ಜುಲೈ 2023 ರಲ್ಲಿ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಪಾಟೀಲ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಮತ್ತು ದೂರನ್ನು ರದ್ದುಗೊಳಿಸಿ, ಪ್ರಕರಣದಲ್ಲಿ ರಿಲೀಫ್ ನೀಡಿತ್ತು. ಆದರೆ ತರುವಾಯ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ತಪ್ಪಾಗಿ ಪ್ರಕರಣ ರದ್ದುಗೊಳಿಸಿದೆ ಎಂದು ಮೇಲ್ಮನವಿಯಲ್ಲಿ ಹೇಳಿತ್ತು.

ಪಾಟೀಲ್ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ. ಚುನಾವಣಾ ಕರ್ತವ್ಯದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ನಿಂದನೆ ಮಾಡಿದ ಗುಂಪಿನ ಭಾಗವೆಂದು ತೋರಿಸುವ ವೀಡಿಯೊ ರೆಕಾರ್ಡಿಂಗ್ ಮತ್ತು ಛಾಯಾಚಿತ್ರಗಳ ರೂಪದಲ್ಲಿ ದಾಖಲೆಯಲ್ಲಿ ಇರಿಸಲಾಗಿದೆ. ಇವಿಎಂ ಯಂತ್ರಗಳನ್ನು ಹಾನಿಗೊಳಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ ತಿಳಿಸಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ವೇಳೆ ಚುನಾವಣಾಧಿಕಾರಿಗಳ ಮೇಲೆ ದಾಳಿ ಮಾಡಿ ವಾಹನಗಳಿಗೆ ಹಾನಿ ಮಾಡಿ ಇವಿಎಂ ಸೇರಿದಂತೆ ಚುನಾವಣಾ ಸಾಮಗ್ರಿಗಳನ್ನು ಧ್ವಂಸಗೊಳಿಸುವಲ್ಲಿ ಆರೋಪಿ ಸಕ್ರಿಯ ಪಾತ್ರ ವಹಿಸಿದ್ದಾರೆ ಮತ್ತು ನೇತೃತ್ವ ವಹಿಸಿದ್ದಾರೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬಲವಾಗಿ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!