ಅಮೇಥಿ ಕಾಂಗ್ರೆಸ್ ಅಭ್ಯರ್ಥಿ ಕೆಎಲ್ ಶರ್ಮಾ ಅವರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ 
ದೇಶ

5ನೇ ಹಂತದ ಲೋಕಸಭಾ ಚುನಾವಣೆ: ರಾಯ್ ಬರೇಲಿ, ಅಮೇಥಿಯಲ್ಲಿ ನಾಳೆ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ನವದೆಹಲಿ: ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

4.26 ಕೋಟಿ ಮಹಿಳೆಯರು ಮತ್ತು 5,409 ತೃತೀಯಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಹೆಚ್ಚು ಜನರು ಈ ಸುತ್ತಿನಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. 94,732 ಮತಗಟ್ಟೆಗಳಲ್ಲಿ 9.47 ಲಕ್ಷ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಮಹಾರಾಷ್ಟ್ರದಲ್ಲಿ 13, ಉತ್ತರ ಪ್ರದೇಶದಲ್ಲಿ 14, ಪಶ್ಚಿಮ ಬಂಗಾಳದಲ್ಲಿ 7, ಬಿಹಾರದಲ್ಲಿ 5, ಜಾರ್ಖಂಡ್‌ನಲ್ಲಿ 3, ಒಡಿಶಾದಲ್ಲಿ 5, ಜಮ್ಮು-ಕಾಶ್ಮೀರದಲ್ಲಿ ಒಂದು ಮತ್ತು ಲಡಾಖ್‌ನಲ್ಲಿ ಏಕೈಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಏಳು ಹಂತದ ಚುನಾವಣೆಗಳಲ್ಲಿ ಈ ಸುತ್ತಿನಲ್ಲಿ ಕನಿಷ್ಠ ಸಂಖ್ಯೆಯ 49 ಸ್ಥಾನಗಳನ್ನು ಒಳಗೊಂಡಿದೆ. ಬಿಜೆಪಿಗೆ ಇದು ಮತ್ತೊಂದು ಪ್ರಮುಖ ಹಂತವಾಗಿದೆ. ಏಕೆಂದರೆ ಇವುಗಳಲ್ಲಿ 40 ಕ್ಕೂ ಹೆಚ್ಚು ಸ್ಥಾನಗಳು ಎನ್ ಡಿಎ ಮೈತ್ರಿಕೂಟದೊಂದಿಗೆ ಇದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!