ಕೇಂದ್ರ ಗೃಹ ಸಚಿವ ಅಮಿತ್ ಶಾ PTI
ದೇಶ

5ನೇ ಹಂತದ ಲೋಕಸಭಾ ಚುನಾವಣೆ: ಈಗಾಗಲೇ ಏಕಾಂಗಿಯಾಗಿ ಬಿಜೆಪಿ 310 ಸ್ಥಾನ ಗೆದ್ದಿದೆ- ಅಮಿತ್ ಶಾ

ಲೋಕಸಭೆ ಚುನಾವಣೆಯ ಐದು ಹಂತಗಳು ಪೂರ್ಣಗೊಂಡ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) 310 ಸ್ಥಾನಗಳನ್ನು ಪಡೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಐದು ಹಂತಗಳು ಪೂರ್ಣಗೊಂಡ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) 310 ಸ್ಥಾನಗಳನ್ನು ಪಡೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಒಡಿಶಾದಲ್ಲಿ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯವನ್ನು 'ಬಾಬು-ರಾಜ್' ನಿಂದ ಮುಕ್ತಗೊಳಿಸುವಂತೆ ಒಡಿಶಾದ ಜನರಿಗೆ ಕರೆ ನೀಡಿದ್ದು ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಸಂಬಲ್ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ಈ ಬಾರಿ ಒಡಿಶಾದಲ್ಲಿ ಬಿಜೆಪಿಯ ಚುನಾವಣಾ ಚಿಹ್ನೆ 'ಕಮಲ' ಅರಳಲಿದೆ ಎಂದರು. ರಾಜ್ಯದಲ್ಲಿ ಬೆರಳೆಣಿಕೆಯಷ್ಟು ಅಧಿಕಾರಿಗಳು ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಒಡಿಶಾದ ಸಂಬಲ್ಪುರ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ.

ಐದನೇ ಹಂತದ ಮತದಾನದ ನಂತರ ಬಿಜೆಪಿ ಈಗಾಗಲೇ 310 ಸ್ಥಾನಗಳನ್ನು ಪಡೆದುಕೊಂಡಿದೆ. ಆರು ಮತ್ತು ಏಳನೇ ಸುತ್ತಿನ ಮತದಾನದ ನಂತರ ನಮಗೆ 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ. ಈ ಚುನಾವಣೆಯು ರಾಜ್ಯದಲ್ಲಿ ಪ್ರಸ್ತುತ 'ಬಾಬು ರಾಜ್' ಅನ್ನು ಕೊನೆಗೊಳಿಸಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿನ ಬಿಜು ಜನತಾ ದಳ (ಬಿಜೆಡಿ) ಸರ್ಕಾರವು ಒಡಿಶಾದ ಹೆಮ್ಮೆ, ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಅವಮಾನಿಸಿದೆ ಎಂದು ಶಾ ಆರೋಪಿಸಿದರು. ಜಗನ್ನಾಥ ದೇವಾಲಯವನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಲು ಬಿಜೆಡಿ ಸರ್ಕಾರ ಬಯಸಿದೆ. ಮಠಗಳು ಮತ್ತು ದೇವಾಲಯಗಳನ್ನು ನಾಶಪಡಿಸಲಾಗಿದೆ ಮತ್ತು ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಇನ್ನೂ ಸಾರ್ವಜನಿಕರಿಗೆ ತೆರೆಯಲಾಗಿಲ್ಲ ಎಂದು ಆರೋಪಿಸಿದರು.

'ಅಧಿಕಾರಿ ರಾಜ್' ಹೇರುವ ಮೂಲಕ ನವೀನ್ ಬಾಬು ಒಡಿಶಾದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT