ಪವನ್ ಸಿಂಗ್ 
ದೇಶ

ಎನ್ ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ: ಭೋಜ್‌ಪುರಿ ಚಿತ್ರನಟ ಪವನ್ ಸಿಂಗ್ ಬಿಜೆಪಿಯಿಂದ ಉಚ್ಛಾಟನೆ

ಎನ್ ಡಿಎ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜ್‌ಪುರಿ ಚಲನಚಿತ್ರ ನಟ ಪವನ್ ಸಿಂಗ್ ಅವರನ್ನು ಬಿಜೆಪಿ ಬುಧವಾರ ಉಚ್ಚಾಟಿಸಿದೆ. ಕರಕಟ್ ಕ್ಷೇತ್ರದಲ್ಲಿ ಅಧಿಕೃತ ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪವನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಬಿಹಾರ: ಎನ್ ಡಿಎ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜ್‌ಪುರಿ ಚಲನಚಿತ್ರ ನಟ ಪವನ್ ಸಿಂಗ್ ಅವರನ್ನು ಬಿಜೆಪಿ ಬುಧವಾರ ಉಚ್ಚಾಟಿಸಿದೆ. ಕರಕಟ್ ಕ್ಷೇತ್ರದಲ್ಲಿ ಅಧಿಕೃತ ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪವನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಎನ್‌ಡಿಎ ಅಭ್ಯರ್ಥಿ ಉಪೇಂದ್ರ ಕುಶ್ವಾಹ ಪರ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ರ್‍ಯಾಲಿಗೆ ಇನ್ನೇರಡು ದಿನ ಬಾಕಿ ಇರುವಂತೆಯೇ, ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ ಪವನ್ ಸಿಂಗ್ ವಿರುದ್ಧ ಬಿಜೆಪಿ ಈ ಕ್ರಮ ಕೈಗೊಂಡಿದೆ.

ಪ್ರಧಾನಿ ಮೋದಿ ನಾಳೆ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ತಿಂಗಳ ಆರಂಭದಲ್ಲಿ ಪವನ್ ಸಿಂಗ್, ಬಿಜೆಪಿಯ ಸಲಹೆ ದಿಕ್ಕರಿಸಿ ಬಿಹಾರದ ಕರಕಟ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದರು.

ಮಾರ್ಚ್ 2024 ರಲ್ಲಿ, ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಹಾಲಿ ಸಂಸದ ಶತ್ರುಘ್ನ ಸಿನ್ಹಾ ವಿರುದ್ಧ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿಲು ಪವನ್ ಸಿಂಗ್ ಗೆ ಬಿಜೆಪಿ ಟಿಕೆಟ್ ಘೋಷಿಸಿತ್ತು. ಆದರೆ, ಅವರ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!