ಮಲ್ಲಿಕಾರ್ಜುನ ಖರ್ಗೆ 
ದೇಶ

ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಈ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದೆ: ಮಲ್ಲಿಕಾರ್ಜುನ ಖರ್ಗೆ

ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ವಿಶ್ವಾಸ ಕೊರತೆಯಿಂದಲ್ಲ. ಹಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಕ್ತಿ ಹೊಂದಿರುವ ಇತರ ಪಕ್ಷಗಳಿಗೆ ಅವಕಾಶ ಮಾಡಿಕೊಟ್ಟು ಇಂಡಿಯೊ ಒಕ್ಕೂಟದ ಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲು ನಾವು ಈ ತಂತ್ರವನ್ನು ಅನುಸರಿಸಿದೆವು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿ: ಇಂಡಿಯಾ ಒಕ್ಕೂಟವನ್ನು ಒಗ್ಗೂಡಿಸಿ ಬಿಜೆಪಿಯನ್ನು ಸೋಲಿಸುವ ಕಾರ್ಯತಂತ್ರದ ಭಾಗವಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಜ್ಞಾಪೂರ್ವಕವಾಗಿ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ವಿಶ್ವಾಸ ಕೊರತೆಯಿಂದಲ್ಲ. ಹಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಕ್ತಿ ಹೊಂದಿರುವ ಇತರ ಪಕ್ಷಗಳಿಗೆ ಅವಕಾಶ ಮಾಡಿಕೊಟ್ಟು ಇಂಡಿಯೊ ಒಕ್ಕೂಟದ ಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲು ನಾವು ಈ ತಂತ್ರವನ್ನು ಅನುಸರಿಸಿದೆವು ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಒಂದು ಶಕ್ತಿಯಾಗಿದ್ದು ಅವರು ಸ್ಟಾರ್ ಪ್ರಚಾರಕರು, ಚುನಾವಣೆಯಲ್ಲಿ ಸ್ಪರ್ಧಿಸದಿರುವ ಅವರ ನಿರ್ಧಾರ ಸರಿಯಾಗಿದೆ ಎಂದರು.

ರಾಹುಲ್ ಗಾಂಧಿ ಅವರು ವಯನಾಡು ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ಗೆದ್ದರೆ ಯಾವ ಸ್ಥಾನವನ್ನು ತೊರೆಯಬೇಕು ಎಂಬುದು ಅವರ ವೈಯಕ್ತಿಕ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದರು.

ನಾವು ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಪ್ರಜ್ಞಾಪೂರ್ವಕ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಮೈತ್ರಿ ಪಾಲುದಾರರನ್ನು ಒಟ್ಟಿಗೆ ಇರಿಸಲು ಹೀಗೆ ಮಾಡಿದ್ದೇವೆ. ಇತರ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಪ್ರತಿ ರಾಜ್ಯದಲ್ಲೂ ಸಮ್ಮಿಶ್ರ ರಚನೆಗೆ ಕಾಂಗ್ರೆಸ್ ಸಮಿತಿಯನ್ನು ರಚಿಸಿತು. ಪಕ್ಷದ ಹೈಕಮಾಂಡ್ ಈ ತಂತ್ರವನ್ನು ಅನುಮೋದಿಸಿದೆ. ನಾವು ಪ್ರತಿ ರಾಜ್ಯದಲ್ಲೂ ಸಮಾಲೋಚನೆ ನಡೆಸಿದ್ದೇವೆ ಎಂದರು.

ಕಾಂಗ್ರೆಸ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 328 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಇಂಡಿಯಾ ಒಕ್ಕೂಟದ ಇತರ ಮೈತ್ರಿ ಪಕ್ಷಗಳಿಗೆ 200 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಂತಹ ರಾಜ್ಯಗಳಲ್ಲಿ ಪರಸ್ಪರರ ವಿರುದ್ಧ ಹೋರಾಡುತ್ತಿರುವ ಅನೇಕ ಮೈತ್ರಿ ಪಾಲುದಾರರ ಕುರಿತು ಅವರು, "ಕೇಂದ್ರ ಸರ್ಕಾರದ ವಿರುದ್ಧ ಹೋರಾಡುವಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.

ಪ್ರತಿ ರಾಜ್ಯವು ವಿಭಿನ್ನ ಮೈತ್ರಿ ಹೊಂದಿದೆ, ಆದರೆ ನಾವೆಲ್ಲರೂ ಬಿಜೆಪಿ ಮತ್ತು ಮೋದಿಯವರ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ ಎಂದರು. ಪಕ್ಷಗಳು ರಾಷ್ಟ್ರದ ಹಿತಾಸಕ್ತಿ ಹೊಂದಿರುವ ಉತ್ತಮ ಚಿಂತನೆಯ ಮಾರ್ಗವನ್ನು ಹೊಂದಿವೆ ಎಂದರು.

ನಮ್ಮ ಸರ್ಕಾರ ಬಂದರೆ ನಾವು ಎಲ್ಲಾ ಕಾನೂನುಗಳನ್ನು ಪರಿಶೀಲಿಸುತ್ತೇವೆ, ಜನರಿಗೆ ಕಿರುಕುಳ ನೀಡಲು ಏನೇ ಮಾಡಿದರೂ ನಾವು ಅದನ್ನು ವಿರೋಧಿಸುತ್ತೇವೆ, ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ, ತನಿಖೆ ಆಗಬೇಕು. ಮತ್ತು ಸರಿಯಾದ ವಿಚಾರಣೆ, ಆದರೆ ಬಿಜೆಪಿಯೇ ಸಾಕ್ಷಿ, ಪ್ರಕರಣಗಳನ್ನು ಸೃಷ್ಟಿಸಿ ಜನರನ್ನು ಕಂಬಿ ಹಿಂದೆ ಹಾಕುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT