ಪೋರ್ಷೆ ಕಾರು ಅಪಘಾತ online desk
ದೇಶ

ಪೋರ್ಷೆ ಕಾರು ಅಪಘಾತ: ಆರೋಪಿ ಅಪ್ರಾಪ್ತನಿಗೆ ನೊಟೀಸ್, ಬಾಲ ನ್ಯಾಯ ಮಂಡಳಿ ಎದುರು ಹಾಜರಾಗಲು ಸೂಚನೆ

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರಕರಣದ ಆರೋಪಿ ಅಪ್ರಾಪ್ತನಿಗೆ ನೊಟೀಸ್ ಜಾರಿಗೊಳಿಸಲಾಗಿದ್ದು ಬಾಲ ನ್ಯಾಯ ಮಂಡಳಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರಕರಣದ ಆರೋಪಿ ಅಪ್ರಾಪ್ತನಿಗೆ ನೊಟೀಸ್ ಜಾರಿಗೊಳಿಸಲಾಗಿದ್ದು ಬಾಲ ನ್ಯಾಯ ಮಂಡಳಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.

ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಕ್ಕಾಗಿ ಸ್ನೇಹಿತರೊಂದಿಗೆ ತೆರಳಿ ಪಬ್ ನಲ್ಲಿ ಸಂಭ್ರಮಾಚರಣೆ ಮಾಡಿ ಪೋರ್ಷೆ ಎಲೆಕ್ಟ್ರಿಕ್ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ಅಪ್ರಾಪ್ತ ಬಾಲಕ ಮಾರ್ಗ ಮಧ್ಯೆ 200 ಕಿ.ಮೀ ವೇಗದಲ್ಲಿ ಬಂದು ದ್ವಿಚಕ್ರ ವಾಹನ ಸವಾರರರಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರು.

ಬಾಲ ನ್ಯಾಯಮಂಡಳಿ ನೀಡಿರುವ ಜಾಮೀನನ್ನು ಮರುಪರಿಶೀಲಿಸಬೇಕೆಂದು ಅರ್ಜಿ ಸಲ್ಲಿಸಿದ ಬಳಿಕ ಪೊಲೀಸರು ನೊಟೀಸ್ ಜಾರಿಗೊಳಿಸಿದ್ದಾರೆ. ಮಂಡಳಿಯು ಇಲ್ಲಿನ ಯರವಾಡ ಪ್ರದೇಶದಲ್ಲಿರುವ ತನ್ನ ಕಚೇರಿಯಲ್ಲಿ ಮಧ್ಯಾಹ್ನ ಪರಿಷ್ಕರಣೆ ಅರ್ಜಿಯನ್ನು ಆಲಿಸುವ ನಿರೀಕ್ಷೆಯಿದೆ.

ಮಹಾರಾಷ್ಟ್ರದ ಪುಣೆ ನಗರದ ಕಲ್ಯಾಣಿ ನಗರದಲ್ಲಿ ಈ ಅಪಘಾತವಾದಾಗ ಕಾರು ಚಾಲನೆ ಮಾಡುತ್ತಿದ್ದ 17 ವರ್ಷದ ಬಾಲಕ ಪಾನಮತ್ತನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ. ಪೋರ್ಷೆ ಕಾರು ಇಬ್ಬರು ಮೋಟರ್‌ಬೈಕ್‌ನಲ್ಲಿದ್ದ ಸಾಫ್ಟ್‌ವೇರ್ ಇಂಜಿನಿಯರ್‌ಗಳನ್ನು ಮಾರಣಾಂತಿಕವಾಗಿ ಡಿಕ್ಕಿ ಹೊಡೆದಿದೆ.

ರಿಯಲ್ ಎಸ್ಟೇಟ್ ಡೆವಲಪರ್‌ನ ಮಗನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿತ್ತು. ಅದು ಗಂಟೆಗಳ ನಂತರ ಅವನಿಗೆ 7,500 ರೂಪಾಯಿಗಳ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT