ಪುಣೆ ಪೋರ್ಷೆ ಕಾರು ಅಪಘಾತ 
ದೇಶ

Pune Porsche crash: ಅಪ್ರಾಪ್ತ ಚಾಲಕನ ಜಾಮೀನು ರದ್ದು, observation home ಗೆ ರವಾನೆ!

ದುಬಾರಿ ಪೋರ್ಷೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿಗೆ ನೀಡಿದ್ದ ಜಾಮೀನನ್ನು ಪುಣೆಯ ಬಾಲಾಪರಾಧಿ ನ್ಯಾಯಾಲಯ ರದ್ದುಗೊಳಿಸಿದ್ದು, ಮಾತ್ರವಲ್ಲದೇ ಆರೋಪಿಯನ್ನು ಅಬ್ಸರ್ವೇಷನ್ ಹೋಮ್ ಗೆ ರವಾನಿಸಿದೆ.

ಪುಣೆ: ದುಬಾರಿ ಪೋರ್ಷೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿಗೆ ನೀಡಿದ್ದ ಜಾಮೀನನ್ನು ಪುಣೆಯ ಬಾಲಾಪರಾಧಿ ನ್ಯಾಯಾಲಯ ರದ್ದುಗೊಳಿಸಿದ್ದು, ಮಾತ್ರವಲ್ಲದೇ ಆರೋಪಿಯನ್ನು ಅಬ್ಸರ್ವೇಷನ್ ಹೋಮ್ ಗೆ ರವಾನಿಸಿದೆ.

ಹೌದು.. ಇದೇ ಮೇ 19ರಂದು ಇಬ್ಬರು ಐಟಿ ಉದ್ಯೋಗಿಗಳನ್ನು ಕಾರು ಅಪಘಾತದಲ್ಲಿ ಕೊಂದಿದ್ದ 17 ವರ್ಷದ ಅಪ್ರಾಪ್ತನಿಗೆ ನೀಡಿದ್ದ ಜಾಮೀನನ್ನು ಪುಣೆಯ ಬಾಲಾಪರಾಧಿ ನ್ಯಾಯಾಲಯ ರದ್ದುಗೊಳಿಸಿದೆ. ಈ ಅಪಘಾತದಲ್ಲಿ ಐಟಿ ಉದ್ಯೋಗಿಗಳಾದ ಮಧ್ಯಪ್ರದೇಶ ಮೂಲದ ಅನೀಶ್ ಮತ್ತು ಅಶ್ವಿನಿ ಕೋಸ್ಟಾ ಸಾವನ್ನಪ್ಪಿದ್ದರು.

ಈ ಪ್ರಕರಣದಲ್ಲಿ ಬಾಲಾಪರಾಧಿಗೆ ಜಾಮೀನು ನೀಡಿದ್ದಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆ ಜಾಮೀನನ್ನು ಇದೀಗ ಬಾಲಾಪರಾಧಿ ನ್ಯಾಯಾಲಯ ರದ್ದುಗೊಳಿಸಿದ್ದು, ಮಾತ್ರವಲ್ಲದೇ ನ್ಯಾಯಾಲಯವು ಜೂನ್ 5ರವರೆಗೆ ಆತನನ್ನು ಅಬ್ಸರ್ವೇಶನ್ ಹೋಮ್‌ಗೆ ಕಳುಹಿಸಿದೆ.

ಅಪಘಾತದಲ್ಲಿ ಮೃತರಾದವರು 24 ವರ್ಷದವರಾಗಿದ್ದು, ಇಬ್ಬರೂ ಸ್ನೇಹಿತರ ಗುಂಪಿನೊಂದಿಗೆ ಊಟಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ವೇಗವಾಗಿ ಬಂದ ಪೋರ್ಷೆ ಕಾರು ಅವರಿಗೆ ಡಿಕ್ಕಿ ಹೊಡೆದಿತ್ತು. ತೀವ್ರ ರಕ್ತಸ್ರಾವವಾಗಿ ಅವರಿಬ್ಬರೂ ಮೃತಪಟ್ಟಿದ್ದರು. ಪುಣೆಯ ಬಾರ್‌ನಲ್ಲಿ ಮದ್ಯ ಸೇವಿಸಿ ಇಬ್ಬರನ್ನು ಪೋರ್ಷೆ ಕಾರಿಗೆ ಡಿಕ್ಕಿ ಹೊಡೆದು ಇಬ್ಬರನ್ನು ಕೊಂದ 17 ವರ್ಷದ ಬಾಲಕನಿಗೆ ನೀಡಲಾಗಿದ್ದ ಜಾಮೀನನ್ನು ನ್ಯಾಯಮೂರ್ತಿ ಜುವೆನೈಲ್ ಬೋರ್ಡ್ ಇಂದು ರದ್ದುಗೊಳಿಸಿದೆ.

ಅಪರಾಧದ ಆಧಾರದ ಮೇಲೆ ಪ್ರಾಸಿಕ್ಯೂಷನ್ ಸಮಯದಲ್ಲಿ ಅಪ್ರಾಪ್ತ ಆರೋಪಿಯನ್ನು ವಯಸ್ಕನಂತೆ ಪರಿಗಣಿಸಬೇಕೆಂದು ಪುಣೆ ಪೊಲೀಸರು ಒತ್ತಾಯಿಸಿದ್ದರು.

ಬಾಲಾಪರಾಧಿಯನ್ನು ವಯಸ್ಕನಂತೆ ವಿಚಾರಣೆಗೆ ಒಳಪಡಿಸಲು ಮತ್ತು ರಿಮಾಂಡ್ ಹೋಮ್‌ಗೆ ಕಳುಹಿಸಲು ನಾವು ಬಾಲನ್ಯಾಯ ಮಂಡಳಿಯ ಮುಂದೆ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದೇವೆ ಎಂದು ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದ್ದಾರೆ.

“ಆಪರೇಟಿವ್ ಆದೇಶವನ್ನು ಬಾಲಾಪರಾಧಿ ನ್ಯಾಯ ಮಂಡಳಿ ನಮಗೆ ತಿಳಿಸಿದೆ. ಆತ ಹೇಳಿದ ಬಾಲಾಪರಾಧಿ ಆರೋಪಿಯನ್ನು ಜೂನ್ 5ರವರೆಗೆ 15 ದಿನಗಳವರೆಗೆ ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ವಯಸ್ಕನಾಗಿ ಆತನನ್ನು ವಿಚಾರಣೆಗೆ ಒಳಪಡಿಸುವ ಆದೇಶವನ್ನು ನಿರೀಕ್ಷಿಸಲಾಗುತ್ತಿದೆ. ಮುಂದಿನ ತನಿಖೆಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಪೋಲೀಸ್ ಅಧಿಕಾರಿ ಹೇಳಿದ್ದಾರೆ.

ಮದ್ಯ ಸೇವಿಸಿ ವಾಹನ ಚಲಾಯಿಸಿದ್ದಕ್ಕಾಗಿ ಸೆಕ್ಷನ್ 185ರ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದ ನಂತರ ಹದಿಹರೆಯದ ಆರೋಪಿಯನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದರ ನಡುವೆ ಆ ಬಾಲಾಪರಾಧಿಯ ತಂದೆ ವಿಶಾಲ್ ಅಗರ್ವಾಲ್ ಅವರನ್ನು ಇಂದು ಪುಣೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರನ್ನು ಮೇ 24ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಪಬ್ ನಲ್ಲಿ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದಿದ್ದ ಆರೋಪಿ

ಅಪಘಾತ ಮಾಡಿದ ಬಾಲಕ ಆ ದಿನ ಪಬ್​ನಲ್ಲಿ 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ. ಆತನ ತಂದೆ ವಿಶಾಲ್ ಅಗರ್​ವಾಲ್ ತನ್ನ ಮಗನಿಗೆ 2.5 ಕೋಟಿ ರೂ. ಮೌಲ್ಯದ ಪೋರ್ಷೆ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರಿನ ಮಾಲೀಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್​ ಅಗರ್ವಾಲ್​ 1,758 ರೂ.ಗಳ ಶುಲ್ಕವನ್ನು ಪಾವತಿಸದ ಕಾರಣ ಪೋರ್ಷೆ ಟೇಕಾನ್ ನ ಶಾಶ್ವತ ನೋಂದಣಿ ಆಗಿರಲಿಲ್ಲ. ಆ ಪ್ರಕ್ರಿಯೆ ಮಾರ್ಚ್ ನಿಂದ ಬಾಕಿ ಉಳಿದಿದೆ ಎಂದು ರಾಜ್ಯ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಚಾಣಾಕ್ಷತನ ಮೆರೆದ ಪೊಲೀಸರು

ವಿಶಾಲ್‌ ಅಗರ್ವಾಲ್‌ ಇಷ್ಟೆಲ್ಲ ಯೋಜನೆ ರೂಪಿಸಿದರೂ ಪುಣೆ ಕ್ರೈಂ ಬ್ರ್ಯಾಂಚ್‌ ಪೊಲೀಸರು ಸಂಭಾಜಿನಗರದಲ್ಲಿ ವಿಶಾಲ್‌ ಅಗರ್ವಾಲ್‌ ಅವರನ್ನು ಬಂಧಿಸಿದರು. ಸಿಸಿಟಿವಿ ಕ್ಯಾಮೆರಾ ಹಾಗೂ ವಿಶಾಲ್‌ ಅಗರ್ವಾಲ್‌ ಗೆಳೆಯನ ಕಾರಿನ ಜಿಪಿಎಸ್‌ ಟ್ರ್ಯಾಕ್‌ ಮಾಡಿ, ಕೊನೆಗೂ ಅವರನ್ನು ಬಂಧಿಸಿದ್ದಾರೆ. ಸಂಭಾಜಿ ನಗರದ ಲಾಡ್ಜ್‌ನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ವಿಶಾಲ್‌ ಅಗರ್ವಾಲ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT