ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌: 7 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತರಾಗಿದ್ದಾರೆ.

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಯಿತು ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಅವರು ಹೇಳಿದ್ದಾರೆ.

ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ 'ಮಾವೋವಾದಿ ಸಮವಸ್ತ್ರ'ದಲ್ಲಿದ್ದ ಏಳು ನಕ್ಸಲರು ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

ದಾಂತೇವಾಡ, ನಾರಾಯಣಪುರ ಮತ್ತು ಬಸ್ತಾರ್ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಸಿಬ್ಬಂದಿ, ಬಸ್ತಾರ್ ಫೈಟರ್ಸ್ ಮತ್ತು ವಿಶೇಷ ಕಾರ್ಯಪಡೆ- ರಾಜ್ಯ ಪೊಲೀಸ್‌ನ ಎಲ್ಲಾ ಘಟಕಗಳು, ಮಾವೋವಾದಿಗಳ ಉಪಸ್ಥಿತಿಯ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.

ಎನ್‌ಕೌಂಟರ್ ಸ್ಥಳದಿಂದ ಒಟ್ಟು ಏಳು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT