ಸಿವಿ ಆನಂದ ಬೋಸ್ 
ದೇಶ

ಬಿಜೆಪಿ ಪರ ಪ್ರಚಾರ: ಪಶ್ಚಿಮ ಬಂಗಾಳ ರಾಜ್ಯಪಾಲರ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಕ್ಷದ ಚಿಹ್ನೆಯನ್ನು ಧರಿಸಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಕ್ಷದ ಚಿಹ್ನೆಯನ್ನು ಧರಿಸಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಗುರುವಾರ ದೂರು ಸಲ್ಲಿಸಿದೆ.

ಕೋಲ್ಕತ್ತಾದ ರಾಮ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ತಮ್ಮ ಎದೆಯ ಮೇಲೆ ಬಿಜೆಪಿ ಚಿಹ್ನೆ ಧರಿಸಿರುವುದು ಕಂಡುಬಂದಿದೆ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ನೀಡಿದ ದೂರಿನಲ್ಲಿ ಟಿಎಂಸಿ ಆರೋಪಿಸಿದೆ.

"ಪಶ್ಚಿಮ ಬಂಗಾಳ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸಿ ವಿ ಆನಂದ ಬೋಸ್ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪರ ಪ್ರಚಾರಕ್ಕಾಗಿ ತಮ್ಮ ಅತ್ಯುನ್ನತ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ನಿಮ್ಮ ಗಮನಕ್ಕೆ ತಂದಿದ್ದೇವೆ’’ ಎಂದು ಟಿಎಂಸಿ ತನ್ನ ದೂರಿನಲ್ಲಿ ಹೇಳಿದೆ.

ಗೌರವಾನ್ವಿತ ರಾಜ್ಯಪಾಲರ ನಡವಳಿಕೆಯು ಪ್ರಜಾಸತ್ತಾತ್ಮಕವಲ್ಲ ಮತ್ತು ಅವರು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆ ಮಾತ್ರವಲ್ಲದೆ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅಲ್ಲದೆ ಈ ಹಿಂದೆ ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರ ಮಾಡಲು ತಮ್ಮ ಕಚೇರಿಗಳನ್ನು ಬಳಸಿಕೊಂಡ ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ