ಕೇದಾರನಾಥ್ ನಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ 
ದೇಶ

Kedarnath Video: ಪೈಲಟ್ ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, ತಪ್ಪಿದ ಭಾರಿ ಅನಾಹುತ!

ಖ್ಯಾತ ಧಾರ್ಮಿಕ ಯಾತ್ರಾ ತಾಣ ಕೇದಾರನಾಥದಲ್ಲಿ ಹೆಲಿಕಾಪ್ಟರ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಡೆಹ್ರಾಡೂನ್: ಖ್ಯಾತ ಧಾರ್ಮಿಕ ಯಾತ್ರಾ ತಾಣ ಕೇದಾರನಾಥದಲ್ಲಿ ಹೆಲಿಕಾಪ್ಟರ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಇಂದು (ಶುಕ್ರವಾರ) ಮುಂಜಾನೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್‌ ಸಿರ್ಸಿ ಹೆಲಿಪ್ಯಾಡ್‌ನಿಂದ ಕೇದಾರನಾಥಕ್ಕೆ ಟೇಕಾಫ್‌ ಆಗಿತ್ತು.

ಮಾರ್ಗ ಮಧ್ಯದಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು, ಪೈಲಟ್‌ ತೆಗೆದುಕೊಂಡ ತ್ವರಿತ ನಿರ್ಧಾರದಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿವೆ.

ಹೆಲಿಕಾಪ್ಟರ್‌ನಲ್ಲಿ ಪೈಲಟ್‌ ಸೇರಿದಂತೆ ಏಳು ಮಂದಿ ಯಾತ್ರಿಕರು ಇದ್ದರು. ಇದ್ದಕ್ಕಿದ್ದ ಹಾಗೆ ತಾಂತ್ರಿಕ ಅಡಚಣೆ ಉಂಟಾದ ಪರಿಣಾಮ ಕೇದಾರನಾಥದ ಹೆಲಿಪ್ಯಾಡ್‌ನಿಂದ ಕೆಲವು ಮೀಟರ್‌ಗಳ ದೂರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಯಾತ್ರಾರ್ಥಿಗಳು ದೇವರ ದರ್ಶನ ಪಡೆದ ನಂತರ ಹಿಂತಿರುಗಲಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಗಹರ್ವಾರ್ ಹೇಳಿದ್ದಾರೆ.

ಚಾರ್ ಧಾಮ್ ಯಾತ್ರೆಗೆ ಹರಿದ ಭಕ್ತಸಾಗರ

ಇನ್ನು ತಿಂಗಳ ಹಿಂದೆ ಆರಂಭವಾದ ಪವಿತ್ರ ಚಾರ್ ಧಾಮ್ ಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಇಲ್ಲಿಯವರೆಗೆ 3 ಲಕ್ಷ 40 ಸಾವಿರ ಯಾತ್ರಿಕರು ಗಂಗೋತ್ರಿ-ಯಮುನೋತ್ರಿ ಧಾಮಕ್ಕೆ ಭೇಟಿ ನೀಡಿದ್ದಾರೆ. ಕಳೆದ ಗುರುವಾರದವರೆಗೆ 1 ಲಕ್ಷದ 64 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಯಮುನೋತ್ರಿ ಧಾಮಕ್ಕೆ ಭೇಟಿ ನೀಡಿದ್ದು, 1 ಲಕ್ಷದ 51 ಸಾವಿರ ಯಾತ್ರಿಕರು ಗಂಗೋತ್ರಿ ಧಾಮಕ್ಕೆ ಭೇಟಿ ನೀಡಿದ್ದಾರೆ. ಗುರುವಾರದವರೆಗೆ 1 ಲಕ್ಷ 77 ಸಾವಿರದ 749 ಭಕ್ತರು ಬದರಿನಾಥ ಧಾಮಕ್ಕೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT