ಸಿಯೋನ್ ಆಸ್ಪತ್ರೆ 
ದೇಶ

ಮುಂಬೈ: ಸಿಯೋನ್ ಆಸ್ಪತ್ರೆಗೆ ನುಗ್ಗಿದ ಕಾರು, ವೃದ್ಧೆ ಸಾವು

ಸೆಂಟ್ರಲ್ ಮುಂಬೈನ ಸಿವಿಕ್ ಆಸ್ಪತ್ರೆಯೊಳಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮುಂಬೈ: ಸೆಂಟ್ರಲ್ ಮುಂಬೈನ ಸಿವಿಕ್ ಆಸ್ಪತ್ರೆಯೊಳಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸಿಯಾನ್ ಆಸ್ಪತ್ರೆ ಎಂದೂ ಕರೆಯಲ್ಪಡುವ ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಸಿಯೋನ್ ಪೊಲೀಸ್ ಠಾಣೆಯ ಅಧಿಕಾರಿಯ ಪ್ರಕಾರ, ಆಸ್ಪತ್ರೆ ಆವರಣದಲ್ಲಿ ಕಾರು ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.

"ಪ್ರಾಥಮಿಕ ಮಾಹಿತಿ ಪ್ರಕಾರ, ಮಹಿಳೆಗೆ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಆದರೆ ಪ್ರಕರಣವನ್ನು ದಾಖಲಿಸುವ ಮೊದಲು ನಾವು ಆಸ್ಪತ್ರೆಯ ದೂರಿಗಾಗಿ ಕಾಯುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ನಡೆದ ಕಾರು ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ವಿವರಗಳನ್ನು ಸಂಗ್ರಹಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!