ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ನಕ್ಸಲರು ಬಲಿ

ಛತ್ತೀಸ್‌ಗಢದ ದಕ್ಷಿಣ ಬಸ್ತಾರ್ ಪ್ರದೇಶದಲ್ಲಿ ಶನಿವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್‌ಪುರ/ಬಿಜಾಪುರ: ಛತ್ತೀಸ್‌ಗಢದ ದಕ್ಷಿಣ ಬಸ್ತಾರ್ ಪ್ರದೇಶದಲ್ಲಿ ಶನಿವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ನಕ್ಸಲೀಯರನ್ನು ಹೊಡೆದುರುಳಿಸಲಾಗಿದ್ದು, ಮತ್ತೊಬ್ಬರು ನೆರೆಯ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಬಿಜಾಪುರದಲ್ಲಿ, ಮಿರ್ತೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪೆಮಾರ್ಕ-ಕಮ್ಕನಾರ್ ಗ್ರಾಮಗಳ ಸಮೀಪವಿರುವ ಕಾಡಿನಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿದೆ. ಅಲ್ಲಿ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾವೋವಾದಿಗಳ ಪಶ್ಚಿಮ ಬಸ್ತಾರ್ ವಿಭಾಗದ ಸರಬರಾಜು ತಂಡದ ಉಸ್ತುವಾರಿ ಪಂಡ್ರು ಮತ್ತು ಭೈರಮ್‌ಗಢ ಪ್ರದೇಶ ಸಮಿತಿ ಸದಸ್ಯ ಜೋಗಾ ಹಾಗೂ ಇತರ 10 ರಿಂದ 15 ಶಸ್ತ್ರಸಜ್ಜಿತ ಮಾವೋವಾದಿಗಳು ಪ್ರದೇಶದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.

ಎನ್ ಕೌಂಟರ್ ನಂತರ ಡಿಆರ್‌ಜಿ ತಂಡ, ಇಬ್ಬರು ನಕ್ಸಲೀಯರ ದೇಹಗಳನ್ನು, ಶಸ್ತ್ರಾಸ್ತ್ರಗಳು, ವೈರ್‌ಲೆಸ್ ಸೆಟ್, ಬ್ಯಾಗ್‌ಗಳು, ಮಾವೋವಾದಿ ಸಮವಸ್ತ್ರ, ಔಷಧಿಗಳು ಮತ್ತು ದೈನಂದಿನ ಬಳಕೆಯ ಸಾಮಗ್ರಿಗಳನ್ನು ಸ್ಥಳದಿಂದ ವಶಪಡಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!