ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ಅವಘಡ 
ದೇಶ

Rajkot Game Zone Fire: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ಅವಘಡದಲ್ಲಿ ಮೃತರಾದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಅವರ ಕಚೇರಿ ಭಾನುವಾರ ತಿಳಿಸಿದೆ.

ಅಹಮದಾಬಾದ್: ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ಅವಘಡದಲ್ಲಿ ಮೃತರಾದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಅವರ ಕಚೇರಿ ಭಾನುವಾರ ತಿಳಿಸಿದೆ.

ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯವು ಎಕ್ಸ್‌ನಲ್ಲಿ ತಿಳಿಸಿದೆ.

ಗುಜರಾತ್ ಸರ್ಕಾರವು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಘೋಷಿಸಿದೆ.

ಶನಿವಾರ ಸಂಜೆ ಗುಜರಾತ್‌ನ ರಾಜ್‌ಕೋಟ್ ನಗರದ ನಾನಾ-ಮಾವಾ ಪ್ರದೇಶದ ಗೇಮ್ ಝೋನ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅನಾಹುತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 27 ಜನರು ಸಾವಿಗೀಡಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪ್ರಧಾನಿ ಮೋದಿ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಭಾನುವಾರ ಬೆಳಗ್ಗೆ ರಾಜ್‌ಕೋಟ್‌ಗೆ ಭೇಟಿ ನೀಡಿ, ಅಗ್ನಿ ದುರಂತದ ಸ್ಥಳವನ್ನು ಪರಿಶೀಲಿಸಿದರು ಮತ್ತು ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಪಟೇಲ್ ನಂತರ ರಾಜ್‌ಕೋಟ್‌ನ ಹಿರಾಸರ್ ವಿಮಾನ ನಿಲ್ದಾಣದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ, ಗಾಯಾಳುಗಳ ಚಿಕಿತ್ಸೆ ಮತ್ತು ಸ್ಥಳೀಯ ಆಡಳಿತ ಕೈಗೊಂಡ ಇತರ ಕ್ರಮಗಳ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT