ಸ್ಥಳದಲ್ಲಿ ಪೊಲೀಸರು. 
ದೇಶ

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಗೆ ಟ್ರಕ್ ಡಿಕ್ಕಿಯಾಗಿ 11 ಮಂದಿ ದುರ್ಮರಣ, 10 ಮಂದಿಗೆ ಗಾಯ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಬಸ್'ಗೆ ಟ್ರಕ್ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಲಖನೌ: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಬಸ್'ಗೆ ಟ್ರಕ್ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದಿದ್ದು, ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಇವರೆಲ್ಲರೂ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಹೋಗುತ್ತಿದ್ದರು. ಶನಿವಾರ ರಾತ್ರಿ 12.15ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 10 ಭಕ್ತರು ಗಾಯಗೊಂಡಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಬಸ್ ಪ್ರಯಾಣಿಕರು ರಾತ್ರಿ ಶಹಜಹಾನ್‌ಪುರದಲ್ಲಿ ಊಟಕ್ಕೆಂದು ಇಳಿದಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಡಂಪರ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಎಲ್ಲಾ ಗಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಸ್ ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡದ ಪೂರ್ಣಂಗಿರಿಯಲ್ಲಿರುವ ಮಾತೆಯ ಆಸ್ಥಾನಕ್ಕೆ ಹೋಗುತ್ತಿದ್ದರು. ಪ್ರತಿದಿನ ಮಾತೆಯ ಆಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಸೀತಾಪುರದ ಸಿಂಧೌಲಿಯ ಭಕ್ತರು ಇಲ್ಲಿ ದರ್ಶನಕ್ಕೆ ಹೋಗುತ್ತಿದ್ದರು. ಕೆಲವರು ಬಸ್ಸಿನಲ್ಲಿ ಕುಳಿತಿದ್ದರೆ ಕೆಲವರು ಹೊರಗೆ ಅಡ್ಡಾಡುತ್ತಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!