ಅರವಿಂದ ಕೇಜ್ರಿವಾಲ್ 
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅರವಿಂದ ಕೇಜ್ರಿವಾಲ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.

ಆದಾಗ್ಯೂ, ಲೆಫ್ಟಿನೆಂಟ್ ಗವರ್ನರ್ ಅವರ ಅನುಮೋದನೆಯನ್ನು ಪಡೆಯಲು ಸಂಪೂರ್ಣವಾಗಿ ಅಗತ್ಯವಿಲ್ಲದಿದ್ದಲ್ಲಿ ಅವರ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವುದನ್ನು ಮತ್ತು ಅಧಿಕೃತ ಕಡತಗಳಿಗೆ ಸಹಿ ಮಾಡುವುದಕ್ಕೆ ನಿರ್ಬಂಧ ವಿಧಿಸಿತ್ತು.

ಮುಖ್ಯಮಂತ್ರಿ ಇದೀಗ ಸಲ್ಲಿಸಿರುವ ತಮ್ಮ ಹೊಸ ಅರ್ಜಿಯಲ್ಲಿ, ತಾವು ಏಳು ಕೆಜಿ ತೂಕವನ್ನು ಕಳೆದುಕೊಂಡಿರುವುದು ಸೇರಿದಂತೆ ಆರೋಗ್ಯದ ಆಧಾರದ ಮೇಲೆ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸುವಂತೆ ಕೋರಿದ್ದಾರೆ.

ತಾವು ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ ಮತ್ತು ಈ ಉದ್ದೇಶಕ್ಕಾಗಿ ಜೂನ್ 1 ರಂದು ಕೊನೆಗೊಳ್ಳಲಿರುವ ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

2021-22ರಲ್ಲಿ ಜಾರಿಗೆ ಬಂದ ಈಗ ರದ್ದಾಗಿರುವ ದೆಹಲಿ ಸರ್ಕಾರದ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿನ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR, ಸರಪಂಚ್ ಬಂಧನ!

ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಮೂರು ವರ್ಷಗಳಿಂದ 'ಮನೆಯ ವಿದ್ಯುತ್ ಬಿಲ್' ಕಟ್ಟದ ತೇಜ್ ಪ್ರತಾಪ್! ಬಾಕಿ ಇರುವ ಮೊತ್ತ ಎಷ್ಟು ಗೊತ್ತಾ?

ಆಫ್ರಿಕಾದಲ್ಲಿ ಮತ್ತೊಂದು ದಂಗೆ: ಬೆನಿನ್ ಅಧ್ಯಕ್ಷನ ಪದಚ್ಯುತಿ, ಆಡಳಿತ ಮಿಲಿಟರಿ ವಶಕ್ಕೆ, TV ಯಲ್ಲಿ ಕಾಣಿಸಿಕೊಂಡ ಸೈನಿಕರು ಮಾಡಿದ್ದೇನು?

610 ಕೋಟಿ ರೂ. ವಾಪಸ್: ಆರು ದಿನಗಳ ಇಂಡಿಗೋ ವಿಮಾನ ರದ್ದತಿ ಅವ್ಯವಸ್ಥೆ ಬಳಿಕ ಪ್ರಯಾಣಿಕರಿಗೆ ರೀಫಂಡ್!

SCROLL FOR NEXT