ರಾಜ್‌ಕೋಟ್‌ನ TRP ಗೇಮಿಂಗ್ ಝೋನ್ ನಲ್ಲಿ ಕಾಣಿಸಿಕೊಂಡ ಬೆಂಕಿ  
ದೇಶ

ರಾಜ್‌ಕೋಟ್‌ ಗೇಮ್‌ ಝೋನ್‌ ಬೆಂಕಿ ದುರಂತ: ಇಬ್ಬರು ಪೊಲೀಸರು, ಪಾಲಿಕೆ ಸಿಬ್ಬಂದಿ ಸೇರಿದಂತೆ ಐವರು ಅಧಿಕಾರಿಗಳು ಅಮಾನತು

ಅಗತ್ಯ ಅನುಮೋದನೆಗಳಿಲ್ಲದೆ ಈ ಗೇಮ್ ಝೋನ್ ಕಾರ್ಯನಿರ್ವಹಿಸಲು ಅನುಮತಿ ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ದುರ್ಘಟನೆಗೆ ಹೊಣೆಗಾರರನ್ನಾಗಿ ಮಾಡಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಅಹಮದಾಬಾದ್: 28 ಜೀವಗಳನ್ನು ಬಲಿ ಪಡೆದ ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು, ಪಾಲಿಕೆ ಸಿಬ್ಬಂದಿ ಸೇರಿದಂತೆ ಐವರು ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಗುಜರಾತ್ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.

ಅಗತ್ಯ ಅನುಮೋದನೆಗಳಿಲ್ಲದೆ ಈ ಗೇಮ್ ಝೋನ್ ಕಾರ್ಯನಿರ್ವಹಿಸಲು ಅನುಮತಿ ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ದುರ್ಘಟನೆಗೆ ಹೊಣೆಗಾರರನ್ನಾಗಿ ಮಾಡಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಶನಿವಾರದಂದು ಬೆಂಕಿ ಸ್ಫೋಟಗೊಂಡ ಈ ಸ್ಥಳದಲ್ಲಿ ಅಗ್ನಿಶಾಮಕ ಎನ್ಒಸಿ (NOC certificate) ಇಲ್ಲದೆ ಕಾರ್ಯನಿರ್ವಹಿಸುತ್ತಿತ್ತು. ಆಟದ ವಲಯವು ರಸ್ತೆಗಳು ಮತ್ತು ಕಟ್ಟಡಗಳ ಇಲಾಖೆಯಿಂದ ಅನುಮತಿಗಳನ್ನು ಪಡೆದಿದೆ.

ಎನ್‌ಒಸಿ ಪಡೆಯಲು ಅಗ್ನಿಶಾಮಕ ಸುರಕ್ಷತಾ ಸಲಕರಣೆಗಳ ಪುರಾವೆಯನ್ನು ಸಹ ಸಲ್ಲಿಸಿದೆ, ಅದು ಪ್ರಕ್ರಿಯೆಯಲ್ಲಿದ್ದು ಇನ್ನೂ ಪೂರ್ಣಗೊಂಡಿಲ್ಲ ಎಂದು ರಾಜ್‌ಕೋಟ್ ಪೊಲೀಸ್ ಕಮಿಷನರ್ ರಾಜು ಭಾರ್ಗವ ಸುದ್ದಿಗಾರರಿಗೆ ನಿನ್ನೆ ತಿಳಿಸಿದ್ದರು.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶನಿವಾರ ಬೆಂಕಿ ಅವಘಡ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿ ಇಂತಹ ಗಂಭೀರ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಮತ್ತು ಶಿಕ್ಷಾರ್ಹ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದ ಒಂದು ದಿನದ ನಂತರ ಐವರು ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ.

ಅಮಾನತುಗೊಂಡವರಲ್ಲಿ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್‌ನ ನಗರ ಯೋಜನಾ ವಿಭಾಗದ ಸಹಾಯಕ ಎಂಜಿನಿಯರ್ ಜೈದೀಪ್ ಚೌಧರಿ, ಆರ್‌ಎಂಸಿ ಸಹಾಯಕ ನಗರ ಯೋಜಕ ಗೌತಮ್ ಜೋಷಿ, ರಾಜ್‌ಕೋಟ್ ರಸ್ತೆಗಳು ಮತ್ತು ಕಟ್ಟಡಗಳ ಇಲಾಖೆಯ ಉಪ ಕಾರ್ಯನಿರ್ವಾಹಕ ಎಂಜಿನಿಯರ್ ಎಂಆರ್ ಸುಮಾ ಮತ್ತು ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ವಿಆರ್ ಪಟೇಲ್ ಮತ್ತು ಎನ್‌ಐ ರಾಥೋಡ್ ಸೇರಿದ್ದಾರೆ.

ರಾಜ್‌ಕೋಟ್‌ನ ನಾನಾ-ಮಾವಾ ಪ್ರದೇಶದ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ 9 ಮಕ್ಕಳು ಸೇರಿದಂತೆ 28 ಜನರು ಮೃತಪಟ್ಟಿದ್ದಾರೆ.

ಇಬ್ಬರ ಬಂಧನ: ಪೊಲೀಸರು ಘಟನೆಗೆ ಸಂಬಂಧಿಸಿ ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಗೇಮ್ ಝೋನ್‌ನ ಆರು ಪಾಲುದಾರರು ಮತ್ತು ಇನ್ನೊಬ್ಬ ಆರೋಪಿ ವಿರುದ್ಧ ವಿವಿಧ ಆರೋಪಗಳ ಮೇಲೆ ಎಫ್‌ಐಆರ್ ದಾಖಲಾಗಿದೆ.

ಗುಜರಾತ್ ಹೈಕೋರ್ಟ್ ಇದೊಂದು ಸ್ವಯಂಪ್ರೇರಿತ, "ಮಾನವ ನಿರ್ಮಿತ ದುರಂತ" ಎಂದು ಬಣ್ಣಿಸಿದೆ. ಪೆಟ್ರೋಲ್, ಫೈಬರ್‌ಗಳು ಮತ್ತು ಫೈಬರ್‌ಗ್ಲಾಸ್ ಶೀಟ್‌ಗಳಂತಹ ಹೆಚ್ಚು ದಹಿಸುವ ವಸ್ತುಗಳ ಸಂಗ್ರಹವನ್ನು ಈ ಸೌಲಭ್ಯದಲ್ಲಿ ಸಂಗ್ರಹಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಕೇಂದ್ರ ಸರ್ಕಾರವು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT