ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ  
ದೇಶ

ಕಾಂಗ್ರೆಸ್ ಅಲ್ಪಸಂಖ್ಯಾತರ 'ಬಹುದೊಡ್ಡ ಶತ್ರು'; 2024ರ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ವಿಷಯ: ಪ್ರಧಾನಿ ಮೋದಿ

ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ.

ನವದೆಹಲಿ: ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ. ಸಮಾಜದ ಈ ವರ್ಗಗಳ ಜನರನ್ನು ರಕ್ಷಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಎಎನ್‌ಐ ಸುದ್ದಿಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಮೀಸಲಾತಿ ಏಕೆ ನಿರ್ಣಾಯಕ ವಿಷಯವಾಯಿತು ಎಂಬುದನ್ನು ವಿವರಿಸಿದರು, ಸಾಂವಿಧಾನಿಕ ತತ್ವಗಳು ಮತ್ತು ಸಮಾಜದ ನಿರ್ಗತಿಕ ಸಮುದಾಯಗಳ ಹಕ್ಕುಗಳನ್ನು ರಕ್ಷಿಸುವ ಅಗತ್ಯವಿದೆ ಎಂದರು.

ನಾನು ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಹಿಂದುಳಿದ ವರ್ಗದ ಜನರನ್ನು ಎಚ್ಚರಿಸಲು ಬಯಸುತ್ತೇನೆ ಏಕೆಂದರೆ ಅವರನ್ನು ಕತ್ತಲೆಯಲ್ಲಿ ಇರಿಸುವ ಮೂಲಕ ವಿರೋಧ ಪಕ್ಷಗಳು ಅವರನ್ನು ಲೂಟಿ ಮಾಡುತ್ತಿದ್ದಾರೆ. ಚುನಾವಣೆಯು ಅಂತಹ ಸಮಯವಾಗಿದ್ದು, ದೊಡ್ಡ ಬಿಕ್ಕಟ್ಟಿನ ಬಗ್ಗೆ ನಾನು ದೇಶವಾಸಿಗಳಿಗೆ ಅರಿವು ಮೂಡಿಸಬೇಕು. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಭಾರತದ ಸಂವಿಧಾನದ ಮೂಲ ಮನೋಭಾವವನ್ನು ಉಲ್ಲಂಘಿಸಲಾಗುತ್ತಿದೆ. ದಲಿತರು, ಬುಡಕಟ್ಟು ಜನಾಂಗದವರ ಪರವಾಗಿ ಕೆಲಸ ಮಾಡುವವರು ಎಂದು ಹೇಳಿಕೊಳ್ಳುವವರು ವಾಸ್ತವವಾಗಿ ಅವರ ಬದ್ಧ ವಿರೋಧಿಗಳಾಗಿದ್ದಾರೆ.

ಅವರ ಚುನಾವಣಾ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಮುಂದಿನ ಜನಾಂಗ ಕೂಡ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಲಿಯಾಗಬೇಕೆಂದು ನೀವು ಬಯಸುತ್ತೀರಾ, ನಾನು ದಲಿತರು, ಬುಡಕಟ್ಟು ಜನಾಂಗದವರು, ಒಬಿಸಿ ಸಮುದಾಯದ ಸಹೋದರ-ಸಹೋದರಿಯರಿಗಾಗಿ ಹೋರಾಟ ಮಾಡುತ್ತಿದ್ದೇನೆ ಎಂದರು.

ಹಿಂದುಳಿದ ಸಮುದಾಯಗಳಿಗೆ ಅತಿ ದೊಡ್ಡ ಸಹಾನುಭೂತಿ ಹೊಂದಿರುವವರು ವಾಸ್ತವದಲ್ಲಿ ಅವರ ದೊಡ್ಡ ಶತ್ರುಗಳು. ಶಿಕ್ಷಣ ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳನ್ನಾಗಿ ಪರಿವರ್ತಿಸುವ ವಿರೋಧ ಪಕ್ಷಗಳ ಆಲೋಚನೆಯನ್ನು ವಿರೋಧಿಸಿದ ಅವರು, SC, ST ಮತ್ತು OBC ಸಮುದಾಯಗಳ ರಕ್ಷಣೆಗೆ ಇದರಿಂದ ತೊಂದರೆಯಾಗುತ್ತದೆ ಎಂದರು.

ಶೀಘ್ರವಾಗಿ ಶಿಕ್ಷಣ ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳಾಗಿ ಪರಿವರ್ತಿಸಿದರು, ಆ ಮೂಲಕ ಮೀಸಲಾತಿಗಳನ್ನು ತೆಗೆದುಹಾಕಿದರು. ಉದಾಹರಣೆಗೆ, ದೆಹಲಿಯಲ್ಲಿ, ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯವನ್ನು ಅಲ್ಪಸಂಖ್ಯಾತ ಸಂಸ್ಥೆಯಾಗಿ ಗೊತ್ತುಪಡಿಸಲಾಯಿತು, ಇದರಿಂದಾಗಿ ಮೀಸಲಾತಿಗಳ ನಷ್ಟವು ಪ್ರವೇಶ ಮತ್ತು ಉದ್ಯೋಗಗಳ ಮೇಲೆ ಪರಿಣಾಮ ಬೀರಿತು. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ರಕ್ಷಣೆಗಳ ವ್ಯಾಪ್ತಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಪಿಎಂ ಮೋದಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು, ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್‌ನ ವಿಧಾನದ ಪ್ರತಿಬಿಂಬವಾಗಿದೆ ಎಂದರು.

ಕಾಂಗ್ರೆಸ್ ಪಕ್ಷವು ಏಪ್ರಿಲ್ 5 ರಂದು ಬಿಡುಗಡೆಯಾದ ತನ್ನ ಪ್ರಣಾಳಿಕೆ 'ನ್ಯಾಯ ಪತ್ರ'ದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯಲ್ಲಿ ಶೇಕಡಾ 50 ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದಾಗಿ ಉಲ್ಲೇಖಿಸಿದೆ.

ಲೋಕಸಭೆ ಚುನಾವಣೆಯ ಆರು ಹಂತಗಳು ಇಲ್ಲಿಯವರೆಗೆ ಪೂರ್ಣಗೊಂಡಿದ್ದು, ಜೂನ್ 1 ರಂದು 8 ರಾಜ್ಯಗಳ 57 ಕ್ಷೇತ್ರಗಳಲ್ಲಿ ಅಂತಿಮ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT