ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಅವಿಭಕ್ತ ಕುಟುಂಬದ 8 ಮಂದಿಯನ್ನು ಕೊಂದು ವ್ಯಕ್ತಿ ತಾನೂ ನೇಣಿಗೆ ಶರಣು!

ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ.

ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬೊಡಲ್ ಕಚ್ಚರ್‌ ಎನ್ನುವ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅವಿಭಕ್ತ ಕುಟುಂಬವೊಂದರಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಮಹುಲ್‌ಜಿರಿ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾನಸಿಕ ಅಸ್ವಸ್ಥತೆ ಹೊಂದಿರುವ ಈ ವ್ಯಕ್ತಿಯು ತನ್ನ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಚಿಂದ್ವಾರಾದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!