ಶಾರ್ಜೀಲ್ ಇಮಾಮ್‌ 
ದೇಶ

Sedition case: ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್‌ಗೆ ಜಾಮೀನು

ಇಮಾಮ್ ವಿರುದ್ಧ ದೆಹಲಿ ಪೋಲೀಸ್ ವಿಶೇಷ ಶಾಖೆ ದಾಖಲಿಸಿದ ಪ್ರಕರಣದಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ, ಇದನ್ನು ಆರಂಭದಲ್ಲಿ ದೇಶದ್ರೋಹದ ಅಪರಾಧಕ್ಕಾಗಿ ದಾಖಲಿಸಲಾಗಿತ್ತು ಮತ್ತು ನಂತರ ಯುಎಪಿಎಯ ಸೆಕ್ಷನ್ 13 ಅನ್ನು ಅನ್ವಯಿಸಲಾಯಿತು.

ನವದೆಹಲಿ: ದೇಶದ್ರೋಹ ಮತ್ತು ಕಾನೂನುಬಾಹಿರ ಚಟುವಟಿಕೆ ಆರೋಪಗಳನ್ನು ಒಳಗೊಂಡ 2020 ರ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತ ಶಾರ್ಜೀಲ್ ಇಮಾಮ್‌ಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ.

ಈ ಹಿಂದೆ ಶಿಕ್ಷೆಯ ಸಂದರ್ಭದಲ್ಲಿ ಅವರಿಗೆ ನೀಡಬಹುದಾದ ಗರಿಷ್ಠ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಶಿಕ್ಷೆಯನ್ನು ಅನುಭವಿಸಿದ್ದರೂ ಸಹ ತಮಗೆ ಜಾಮೀನು ನೀಡಲು ನಿರಾಕರಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಇಮಾಮ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ಪೀಠವು ಇಮಾಮ್ ಮತ್ತು ದೆಹಲಿ ಪೊಲೀಸರ ಪರ ವಕೀಲರನ್ನು ಆಲಿಸಿದ ನಂತರ ಹೇಳಿದೆ.

ಪ್ರಾಸಿಕ್ಯೂಷನ್ ಪ್ರಕಾರ, ಇಮಾಮ್ ಡಿಸೆಂಬರ್ 13, 2019 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಮತ್ತು ಡಿಸೆಂಬರ್ 16, 2019 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ದ್ವೇಷ ಭಾಷಣ ಮಾಡಿದ್ದು, ಅಲ್ಲಿ ಅವರು ಅಸ್ಸಾಂ ಮತ್ತು ಉಳಿದ ಈಶಾನ್ಯ ಭಾರತದ ರಾಜ್ಯಗಳನ್ನು ದೇಶದಿಂದ ಕತ್ತರಿಸಿ ಬಿಸಾಡುವುದಾಗಿ ಬೆದರಿಕೆ ಹಾಕಿದ್ದರು.

ಇಮಾಮ್ ವಿರುದ್ಧ ದೆಹಲಿ ಪೋಲೀಸ್ ವಿಶೇಷ ಶಾಖೆ ದಾಖಲಿಸಿದ ಪ್ರಕರಣದಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ, ಇದನ್ನು ಆರಂಭದಲ್ಲಿ ದೇಶದ್ರೋಹದ ಅಪರಾಧಕ್ಕಾಗಿ ದಾಖಲಿಸಲಾಗಿತ್ತು ಮತ್ತು ನಂತರ ಯುಎಪಿಎಯ ಸೆಕ್ಷನ್ 13 ಅನ್ನು ಅನ್ವಯಿಸಲಾಯಿತು.

ಈ ಪ್ರಕರಣದಲ್ಲಿ ಅವರು ಜನವರಿ 28, 2020 ರಿಂದ ಬಂಧನದಲ್ಲಿದ್ದರು. ತಾನು ಕಳೆದ ನಾಲ್ಕು ವರ್ಷಗಳಿಂದ ಬಂಧನದಲ್ಲಿದ್ದೇನೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳಿಗೆ ಶಿಕ್ಷೆ) ಅಡಿಯಲ್ಲಿ ಅಪರಾಧಕ್ಕೆ ಗರಿಷ್ಠ ಶಿಕ್ಷೆ 7 ವರ್ಷಗಳಾಗಿದ್ದು, ತಾನು ಈಗಾಗಲೇ ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಅವಧಿಯನ್ನು ಜೈಲಿನಲ್ಲಿ ಕಳೆದಿದ್ದೇನೆ. ಹೀಗಿದ್ದೂ ಜಾಮೀನು ಸಿಕ್ಕಿಲ್ಲ ಎಂದು ಇಮಾಮ್ ವಿಚಾರಣಾ ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದರು.

ಇದೀಗ ಈ ಅರ್ಜಿಯನ್ನು ಪುರಸ್ಕರಿಸಿರುವ ದೆಹಲಿ ಹೈಕೋರ್ಟ್ ಶಾರ್ಜೀಲ್ ಇಮಾಮ್‌ಗೆ ಜಾಮೀನು ಮಂಜೂರು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT