ಅಪಘಾತಕ್ಕೊಳಗಾದ ವಾಹನ 
ದೇಶ

ಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರ ಕರಣ್ ಭೂಷಣ್ ಬೆಂಗಾವಲು ವಾಹನ ಢಿಕ್ಕಿ: ಇಬ್ಬರು ಅಪ್ರಾಪ್ತರ ಸಾವು

ಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನವು ಢಿಕ್ಕಿ ಹೊಡೆದ ಪರಿಣಾಮ, ಇಬ್ಬರು ಬಾಲಕರು ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನಲ್ ಗಂಜ್-ಹುಝೂರ್ ಪುರ್ ರಸ್ತೆಯಲ್ಲಿ ನಡೆದಿದೆ.

ಗೊಂಡಾ(ಉತ್ತರ ಪ್ರದೇಶ): ಸರ್ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನವು ಢಿಕ್ಕಿ ಹೊಡೆದ ಪರಿಣಾಮ, ಇಬ್ಬರು ಬಾಲಕರು ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನಲ್ ಗಂಜ್-ಹುಝೂರ್ ಪುರ್ ರಸ್ತೆಯಲ್ಲಿ ನಡೆದಿದೆ.

ಘಟನೆ ನಡೆದ ಕೂಡಲೇ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನಸಂದಣಿ ಜಮಾವಣೆಗೊಂಡಿದ್ದು, ಪೊಲೀಸರು ಅಪಘಾತವೆಸಗಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಅಪಘಾತವೆಸಗಿದ ಕಾರು ಬಿಜೆಪಿ ಅಭ್ಯರ್ಥಿ ಕರಣ್ ಸಿಂಗ್ ಭೂಷಣ್ ಅವರ ಬೆಂಗಾವಲು ಪಡೆಗೆ ಸೇರಿದೆ.ಅಪಘಾತ ನಡೆದ ಸಂದರ್ಭದಲ್ಲಿ ಕರಣ್ ಭೂಷಣ್ ಸಿಂಗ್ ಅವರು ಕಾರಿನಲ್ಲಿದ್ದರೆ ಎಂಬ ಕುರಿತು ಸದ್ಯ ತನಿಖೆ ನಡೆಯುತ್ತಿದೆ. ಎಫ್‌ ಐ ಆರ್ ನಲ್ಲಿ ಅವರ ಹೆಸರನ್ನು ಸೇರಿಸಲಾಗಿಲ್ಲ ಎಂದು ಹೇಳಲಾಗಿದೆ.

ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ರೆಹಾನ್ ಖಾನ್ (17) ಮತ್ತು ಶೆಹಜಾದ್ ಖಾನ್ (20) ಅವರಿಗೆ ಶಾಲೆಯ ಬಳಿ ಕಾರು ಡಿಕ್ಕಿ ಹೊಡೆದಿದೆ ಎಂದು ಕೆರ್ನಾಲ್‌ಗಂಜ್ ಎಸ್‌ಎಚ್‌ಒ ನಿರ್ಭಯ್ ನಾರಾಯಣ್ ಸಿಂಗ್ ಹೇಳಿದ್ದಾರೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಡಿಕ್ಕಿ ಹೊಡೆದ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸೀತಾದೇವಿ (60) ಅವರಿಗೂ ಡಿಕ್ಕಿ ಹೊಡೆದಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

ಈ ಕುರಿತು ದಾಖಲಾಗಿರುವ ದೂರನ್ನು ಆಧರಿಸಿ ಕರ್ನಲ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಿಗೇ ಕ್ರಮ ಕೈಗೊಂಡಿರುವ ಪೊಲೀಸರು, ಕಾರು ಹಾಗೂ ಚಾಲಕನನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

"ಎಸ್‌ಯುವಿಯಲ್ಲಿದ್ದವರು ಅಪಘಾತಕ್ಕೊಳಗಾದ ಕಾರನ್ನು ಅಲ್ಲಿಯೇ ಬಿಟ್ಟು ಬೇರೆ ವಾಹನದಲ್ಲಿ ಪರಾರಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ಸಂತ್ರಸ್ತರ ಕುಟುಂಬ ಸದಸ್ಯರೊಂದಿಗೆ ರಸ್ತೆ ತಡೆ ನಡೆಸಿ ಅಪಘಾತಕ್ಕೆ ಕಾರಣರಾದವರನ್ನು ಬಂಧಿಸುವಂತೆ ಒತ್ತಾಯಿಸಿದರು.ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಸದ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯು ನಿಯಂತ್ರಣದಲ್ಲಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT