ಶಹಜಹಾನ್ ಶೇಖ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಟಿಎಂಸಿ ನಾಯಕ ಶಹಜಹಾನ್ ಶೇಖ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

ಪಶ್ಚಿಮ ಬಂಗಾಳ ಟಿಎಂಸಿ ನಾಯಕ ಶಹಜಹಾನ್ ಶೇಖ್, ಅವರ ಸಹೋದರ ಮತ್ತು ಇಬ್ಬರು ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ಮೊದಲ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಗುರುವಾರ ತಿಳಿಸಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಅಮಾನತುಗೊಂಡಿರುವ ಪಶ್ಚಿಮ ಬಂಗಾಳ ಟಿಎಂಸಿ ನಾಯಕ ಶಹಜಹಾನ್ ಶೇಖ್, ಅವರ ಸಹೋದರ ಮತ್ತು ಇಬ್ಬರು ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ಮೊದಲ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಗುರುವಾರ ತಿಳಿಸಿದೆ.

ಪ್ರಾಸಿಕ್ಯೂಷನ್ ದೂರಿನಲ್ಲಿ ಹೆಸರಿಸಲಾದ ಇತರ ಆರೋಪಿಗಳೆಂದರೆ ಶಿಬ್ ಪ್ರಸಾದ್ ಹಜ್ರಾ ಮತ್ತು ದಿದರ್ ಬೋಕ್ಷ್ ಮೊಲ್ಲಾ ಹಾಗೂ ಶೇಖ್ ಅಲಂಗೀರ್ (ಶಹಜಹಾನ್ ಶೇಖ್ ಸಹೋದರ).

ಕೋಲ್ಕತ್ತಾದ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಇಡಿ ತಿಳಿಸಿದೆ.

ಸಿಬಿಐ ಕೂಡ ಶೇಖ್ ಮತ್ತು ಇತರ ಕೆಲವರ ವಿರುದ್ಧ ಈ ವಾರ ಚಾರ್ಜ್ ಶೀಟ್ ಸಲ್ಲಿಸಿತ್ತು.

ಮೀನುಗಾರಿಕೆ ವ್ಯವಹಾರದ ನೆಪದಲ್ಲಿ ಅಕ್ರಮ ಹಣ ವರ್ಗಾವಣೆ, ಭೂ ಕಬಳಿಕೆ, ಅಕ್ರಮ ಮೀನು ಸಾಕಾಣಿಕೆ/ವ್ಯಾಪಾರ, ಇಟ್ಟಿಗೆ ಗದ್ದೆಗಳನ್ನು ಕಬಳಿಸುವುದು ಸೇರಿದಂತೆ ಹಲವು ಆರೋಪಗಳನ್ನು ಶಹಜಹಾನ್ ಶೇಖ್ ಎದುರಿಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅಮಾನತುಗೊಂಡಿರುವ ಟಿಎಂಸಿ ನಾಯಕ, ಅವರ ಸಹೋದರ ಮತ್ತು ಅವರ ಇಬ್ಬರು ಸಹಾಯಕರನ್ನು ಇಡಿ ಬಂಧಿಸಿದ್ದು, ಪ್ರಸ್ತುತ ಶಹಜಹಾನ್ ಶೇಖ್ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್‌ನಿಂದ ಹಲ್ಲೆಗೆ ಯತ್ನ, Video Viral

ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿ

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿನ ವೀಸಾ ಕೇಂದ್ರ ಸ್ಥಗಿತಗೊಳಿಸಿದ ಭಾರತ

SCROLL FOR NEXT