ಪತ್ನಿ ಜೊತೆ ಅಮಿತ್ ಶಾ  
ದೇಶ

ಪತ್ನಿ ಜೊತೆಗೆ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ ಅಮಿತ್‌ ಶಾ!

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ತಿರುಮಲ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಮಿತ್ ಶಾ ಕುಟುಂಬ ಸಮೇತರಾಗಿ ಆಗಮಿಸಿದ್ದರು, ಮೊದಲು ರೇಣುಗುಂಟ ವಿಮಾನ ನಿಲ್ದಾಣಕ್ಕೆ ಬಂದಿಳಿದರು ರಸ್ತೆಯ ಮೂಲಕ ತಿರುಪತಿಗೆ ತಲುಪಿದರು. ಪ್ರಧಾನ ಅರ್ಚಕರು ವೈದಿಕ ಸ್ತೋತ್ರ ಪಠಣದ ನಡುವೆ ಅವರಿಗೆ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು. ಭೇಟಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅಮಿತ್ ಶಾ, ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪೆಯು ಪ್ರತಿಯೊಬ್ಬರ ಜೀವನದಲ್ಲಿ ಮೇಲಿರಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಲೋಕಸಭಾ ಚುನಾವಣೆಯ ಕೊನೆಯ ಮತ್ತು 7ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಅಂತ್ಯವಾಗಿದ್ದು ಶನಿವಾರ ಚುನಾವಣೆ ನಡೆಯಲಿದೆ. ಶನಿವಾರ ಸಂಜೆಯಿಂದ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದ್ದು ಜೂನ್‌ 4 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಬೆಂಗಳೂರು: ಮನೆಯಲ್ಲೇ ತಂದೆ-4 ವರ್ಷದ ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!