ಭಿಭವ್ ಕುಮಾರ್ ಗೆ ನ್ಯಾಯಾಂಗ ಬಂಧನ ANI
ದೇಶ

Swati Maliwal Case: ಕೇಜ್ರಿವಾಲ್ ಆಪ್ತ ಸಹಾಯಕ ಭಿಭವ್ ಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಭಿಭವ್ ಕುಮಾರ್ ಗೆ ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಭಿಭವ್ ಕುಮಾರ್ ಗೆ ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಈ ತಿಂಗಳ ಆರಂಭದಲ್ಲಿ ಸಿಎಂ ನಿವಾಸದಲ್ಲಿ ಆಪ್ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಸಲ್ಲಿಸಿದ್ದ ಮನವಿಯ ನಿರ್ವಹಣೆಯ ವಿಷಯದ ಕುರಿತು ದೆಹಲಿ ಹೈಕೋರ್ಟ್ ಶುಕ್ರವಾರ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಇಂದು ಈ ಪ್ರಕರಣದ ಆದೇಶ ನೀಡಿದ್ದು, ಭಿಭವ್ ಕುಮಾರ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಪೋಲೀಸರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಅರ್ಜಿಯನ್ನು ನಿರ್ವಹಿಸುವಂತಿಲ್ಲ ಎಂಬ ಕಾರಣಕ್ಕೆ ನೋಟಿಸ್ ಜಾರಿ ಮಾಡುವುದನ್ನು ವಿರೋಧಿಸಿದ್ದರು.

ಭಿಭವ್ ಕುಮಾರ್ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರ ಮುಂದೆ ಹಾಜರುಪಡಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel