ಭದ್ರತಾ ಪಡೆ 
ದೇಶ

ಜಮ್ಮು-ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್, ಮೂವರು ಉಗ್ರರ ಹತ್ಯೆ, ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯ

ಶನಿವಾರ ಬೆಳಗ್ಗೆ ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಪಾಕಿಸ್ತಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮತ್ತು ಖನ್ಯಾರ್‌ನಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಶನಿವಾರ ಬೆಳಗ್ಗೆ ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಪಾಕಿಸ್ತಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..

ಈ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಖನ್ಯಾರ್‌ನ ಜನನಿಬಿಡ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಇದು ಎನ್ ಕೌಂಟರ್ ಗೆ ತಿರುಗಿದ್ದು, ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.

ಕಾರ್ಯಾಚರಣೆ ವೇಳೆ ಉಗ್ರರು ಅಡಗಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದಲ್ಲಿ ದಟ್ಟವಾದ ಬೂದು ಹೊಗೆ ಕಾಣಿಸಿಕೊಂಡಿದೆ. ಇನ್ನೂ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಹತ್ಯೆಯಾದ ಉಗ್ರ ಪಾಕಿಸ್ತಾನಿಯಾಗಿದ್ದು, ಎಲ್‌ಇಟಿಗೆ ಸೇರಿದವನು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಮತ್ತು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಸೇನೆಯ 92 ಮೂಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಎನ್ ಕೌಂಟರ್ ನಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಾಂಗಸ್-ಲರ್ನೂ ಪ್ರದೇಶದ ಹಲ್ಕನ್ ಗಲಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಚಿತ ಮಾಹಿತಿ ಪಡೆದ ನಂತರವೇ ಭದ್ರತಾ ಪಡೆಗಳು ಇಂತಹ ಕ್ರಮ ಕೈಗೊಂಡಿದ್ದಾರೆ. ಇದೊಂದು ಗಮನಾರ್ಹ ಸಾಧನೆಯಾಗಿದೆ ಎಂದು ಐಜಿಪಿ ವಿಕೆ ಬಿರ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ': ಕೇರಳ BJP ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ; ಅಮಿತ್ ಶಾಗೆ ಪತ್ರ ಬರೆದ ಕಾಂಗ್ರೆಸ್, ಕ್ರಮಕ್ಕೆ ಆಗ್ರಹ

ದೇವಾಲಯದ ಹೊರಗೆ ಹಿಂದೂಯೇತರರು ಪ್ರಸಾದ ಮಾರಾಟ ಮಾಡುವುದು ಕಂಡರೆ ಹೊಡೆಯಿರಿ: ಪ್ರಜ್ಞಾ ಠಾಕೂರ್

Asia Cup 2025: ಸೋಲು ಬೆನ್ನಲ್ಲೇ ಟ್ರೋಫಿಯೊಂದಿಗೆ ಮೈದಾನ ತೊರೆದ ಪಾಕ್ ಸಚಿವ; ACCಯಿಂದ ನಖ್ವಿ ವಜಾಗೊಳಿಸುವಂತೆ BCCI ಒತ್ತಡ!

ಮೈಸೂರಿಗೆ ಹೋಗುವ ಪ್ರಯಾಣಿಕರ ಗಮನಕ್ಕೆ: ದಸರಾ ಪ್ರಯುಕ್ತ KSRTC ಬಸ್ ದರ ಏರಿಕೆ!

Doubled Commission: ಕಾಂಗ್ರೆಸ್ ಆಡಳಿತದಲ್ಲಿ ದುಪ್ಪಟ್ಟು ಕಮಿಷನ್ ದರ, ಕ್ಲಿಯರ್ ಆಗದ ಬಾಕಿಬಿಲ್! ರಾಜ್ಯ ಗುತ್ತಿಗೆದಾರರ ಸಂಘ ಆರೋಪ

SCROLL FOR NEXT