ರಣಧೀರ್ ಜೈಸ್ವಾಲ್ PTI
ದೇಶ

ಭಾರತದ 19 ಕಂಪನಿಗಳನ್ನು ನಿರ್ಬಂಧಿಸಿದ ಅಮೆರಿಕ: ವಿದೇಶಾಂಗ ಸಚಿವಾಲಯ ಹೇಳಿದ್ದೇನು?

ಸಮಸ್ಯೆಯನ್ನು ಪರಿಹರಿಸಲು ಭಾರತವು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಈ ಭಾರತೀಯ ಕಂಪನಿಗಳು ರಷ್ಯಾಕ್ಕೆ ಸಾಮಗ್ರಿಗಳು ಮತ್ತು ತಂತ್ರಜ್ಞಾನವನ್ನು ಸರಬರಾಜು ಮಾಡಿವೆ ಎಂದು ಆರೋಪಿಸಲಾಗಿದೆ.

ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ್ದಕ್ಕಾಗಿ ಭಾರತದ 19 ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧ ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದ್ದು ಭಾರತೀಯ ಕಂಪನಿಗಳು ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದೆ. ಸಮಸ್ಯೆಯನ್ನು ಪರಿಹರಿಸಲು ಭಾರತವು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಈ ಭಾರತೀಯ ಕಂಪನಿಗಳು ರಷ್ಯಾಕ್ಕೆ ಸಾಮಗ್ರಿಗಳು ಮತ್ತು ತಂತ್ರಜ್ಞಾನವನ್ನು ಸರಬರಾಜು ಮಾಡಿವೆ ಎಂದು ಆರೋಪಿಸಲಾಗಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಅಮೆರಿಕ ನಿರ್ಬಂಧಗಳ ಕುರಿತ ವರದಿಗಳನ್ನು ಗಮನಿಸಿದ್ದೇವೆ. ಭಾರತವು ಕಾರ್ಯತಂತ್ರದ ವ್ಯಾಪಾರ ಮತ್ತು ಪ್ರಸರಣ ರಹಿತ ನಿಯಂತ್ರಣಗಳ ಮೇಲೆ ಬಲವಾದ ಕಾನೂನು ಮತ್ತು ನಿಯಂತ್ರಕ ಚೌಕಟ್ಟನ್ನು ಹೊಂದಿದೆ. ನಾವು ಮೂರು ಪ್ರಮುಖ ಬಹುಪಕ್ಷೀಯ ಪ್ರಸರಣ ರಹಿತ ರಫ್ತು ನಿಯಂತ್ರಣ ವ್ಯವಸ್ಥೆಗಳ ಸದಸ್ಯರೂ ಆಗಿದ್ದೇವೆ ಎಂದು ಹೇಳಿದರು.

'ಅನ್ವಯವಾಗುವ ರಫ್ತು ನಿಯಂತ್ರಣ ನಿಬಂಧನೆಗಳ ಬಗ್ಗೆ ಭಾರತೀಯ ಕಂಪನಿಗಳಿಗೆ ಅರಿವು ಮೂಡಿಸಲು ನಾವು ಎಲ್ಲಾ ಸಂಬಂಧಿತ ಇಲಾಖೆಗಳು ಮತ್ತು ಏಜೆನ್ಸಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ. ಅಲ್ಲದೆ, ಜಾರಿಗೆ ತರುತ್ತಿರುವ ಹೊಸ ಕ್ರಮಗಳ ಬಗ್ಗೆಯೂ ಅವರಿಗೆ ತಿಳಿಸಲಾಗುತ್ತಿದೆ. ಈ ಕ್ರಮಗಳು ಕೆಲವು ಸಂದರ್ಭಗಳಲ್ಲಿ ಭಾರತೀಯ ಕಂಪನಿಗಳ ಮೇಲೆ ಪರಿಣಾಮ ಬೀರಬಹುದು ಎಂದರು.

ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ್ದಕ್ಕಾಗಿ 275 ವ್ಯಕ್ತಿಗಳು ಮತ್ತು ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ. ಅದರಲ್ಲಿ 19 ಭಾರತೀಯ ಕಂಪನಿಗಳು ಸೇರಿವೆ. ರಷ್ಯಾಕ್ಕೆ ಸುಧಾರಿತ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಪೂರೈಸಿದ್ದಕ್ಕಾಗಿ ಚೀನಾ, ಸ್ವಿಟ್ಜರ್ಲೆಂಡ್, ಥೈಲ್ಯಾಂಡ್ ಮತ್ತು ಟರ್ಕಿಯ ಕಂಪನಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಯುಎಸ್ ಖಜಾನೆ ಇಲಾಖೆ ತಿಳಿಸಿತ್ತು. ರಷ್ಯಾ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಂಡಿರುವ ಅಮೆರಿಕ ಬುಧವಾರ 398 ಕಂಪನಿಗಳ ಮೇಲೆ ನಿರ್ಬಂಧ ಹೇರಿದೆ. ಭಾರತ, ರಷ್ಯಾ, ಚೀನಾ, ಹಾಂಗ್ ಕಾಂಗ್, ಯುಎಇ, ಟರ್ಕಿ, ಥೈಲ್ಯಾಂಡ್, ಮಲೇಷ್ಯಾ, ಸ್ವಿಟ್ಜರ್ಲೆಂಡ್ ಸೇರಿದಂತೆ ಹನ್ನೆರಡು ದೇಶಗಳ ಈ ಕಂಪನಿಗಳನ್ನು ಬ್ಲಾಕ್ ಲಿಸ್ಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT