ಬಂಧಿತ ಆರೋಪಿಗಳು 
ದೇಶ

ಚೆನ್ನೈ: ಹಲ್ಲೆ, ಚಿತ್ರಹಿಂಸೆಯಿಂದ ಮನೆಗೆಲಸದ ಅಪ್ರಾಪ್ತ ಬಾಲಕಿ ಸಾವು; ಆರು ಮಂದಿ ಬಂಧನ

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿ ಪರಿಶೀಲನೆ ನಡೆಸಿದಾಗ ಸ್ನಾನದ ಕೊಠಡಿಯಲ್ಲಿ ಶವ ಪತ್ತೆಯಾಗಿತ್ತು.

ಚೆನ್ನೈ: ಹಲ್ಲೆ, ಚಿತ್ರಹಿಂಸೆಯಿಂದ 15 ವರ್ಷದ ಅಪ್ರಾಪ್ತ ಬಾಲಕಿಯ ಸಾವು ಆರೋಪಕ್ಕೆ ಸಂಬಂಧಿಸಿದಂತೆ ದಂಪತಿ ಸೇರಿದಂತೆ ಆರು ಮಂದಿಯನ್ನು ಅಮಿಂಜಿಕರೈ ಪೊಲೀಸರು ಬಂಧಿಸಿದ್ದಾರೆ.

ತಂಜಾವೂರು ಮೂಲದ ಅಪ್ರಾಪ್ತ ಬಾಲಕಿ ನಸಿಯಾ ಮತ್ತು ನಿಶಾತ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಅವರು ತಮ್ಮ ಮಗುವನ್ನು ನೋಡಿಕೊಳ್ಳಲು ಡಿಸೆಂಬರ್ 2023 ರಿಂದ ಅಮಿಂಜಿಕರೈನ ಅಪಾರ್ಟ್ ಮೆಂಟ್ ಸಂಕೀರ್ಣದಲ್ಲಿರುವ ಬಾಡಿಗೆ ಮನೆಯಲ್ಲಿ ಬಾಲಕಿಯನ್ನು ಮನೆಗೆಲಸದಲ್ಲಿ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಬಾಲಕಿಯ ಕುಟುಂಬದಲ್ಲಿ ತೊಂದರೆ ಇದ್ದರಿಂದ ತಂಜಾವೂರಿನಲ್ಲಿರುವ ನಿಶಾತ್ ಅವರ ಸಹೋದರಿಯ ಸಲಹೆ ಮೇರೆಗೆ ನಗರಕ್ಕೆ ಕಳುಹಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಮನೆ ಮಾಲೀಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಆರಂಭದಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿತ್ತು, ಆದರೆ ವಿಚಾರಣೆ ನಂತರ ಸತ್ಯಾಂಶ ತಿಳಿದುಬಂದಿದೆ. ಆರೋಪಿಗಳು ಕಳೆದ ಮೂರು ತಿಂಗಳಿನಿಂದ ಬಾಲಕಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಬಾಲಕಿ ಮೇಲೆ ಹಲ್ಲೆ ನಡೆಸಿದ್ದರಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿ ಪರಿಶೀಲನೆ ನಡೆಸಿದಾಗ ಸ್ನಾನದ ಕೊಠಡಿಯಲ್ಲಿ ಶವ ಪತ್ತೆಯಾಗಿತ್ತು. ಆಕೆಯ ದೇಹದ ಮೇಲೆ ಸುಟ್ಟಗಾಯಗಳು ಕಂಡುಬಂದಿತ್ತು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಲ್ಪಾಕ್ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿತ್ತು. ಕೊಲೆ ಆರೋಪದಡಿ ಪ್ರಕರಣ ದಾಖಲಿಸಿರುವ ಪೊಲೀಸರು, ಪೋಕ್ಸೊ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳನ್ನು ದಾಖಲಿಸಿದ್ದಾರೆ. ವಿಚಾರಣೆಯ ನಂತರ, ಎಲ್ಲಾ ಆರು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ