ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ಇನ್ಮುಂದೆ ಯಾವುದೇ ಚುನಾವಣೆಗೂ ಸ್ಪರ್ಧಿಸಲ್ಲ: ಶರದ್ ಪವಾರ್

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಇಂದು ಬಾರಾಮತಿಯಲ್ಲಿ ತಮ್ಮ ಮೊಮ್ಮಗ ಯುಗೇಂದ್ರ ಪವಾರ್ ಅವರ ಪರ ಚುನಾವಣಾ ಪ್ರಚಾರ ನಡೆಸಿದರು.

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎಸ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಮಹತ್ವದ ಘೋಷಣೆ ಮಾಡಿದ್ದು, ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಮುಕ್ತಾಯಗೊಳ್ಳುತ್ತಿರುವ ಕಾರಣ ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

"ನಾನು 14 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಮತ್ತು ನನ್ನ ರಾಜ್ಯಸಭಾ ಅಧಿಕಾರಾವಧಿ ಪೂರ್ಣಗೊಂಡ ನಂತರ ನಾನು ನನ್ನ ಸಂಸದ ಸ್ಥಾನ ಉಳಿಸಿಕೊಳ್ಳಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಯೋಚಿಸುತ್ತಿದ್ದೇನೆ" ಎಂದು ಶರದ್ ಪವಾರ್ ತಿಳಿಸಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಇಂದು ಬಾರಾಮತಿಯಲ್ಲಿ ತಮ್ಮ ಮೊಮ್ಮಗ ಯುಗೇಂದ್ರ ಪವಾರ್ ಅವರ ಪರ ಚುನಾವಣಾ ಪ್ರಚಾರ ನಡೆಸಿದರು. ಮೂರು ಬಾರಿ ಮುಖ್ಯಮಂತ್ರಿಯಾಗಿರುವ ಶರದ್ ಪವಾರ್ ಅವರು, ಹೊಸ ಪೀಳಿಗೆಗೆ ಜವಾಬ್ದಾರಿಯನ್ನು ಹಸ್ತಾಂತರಿಸುವ ಅಗತ್ಯವನ್ನು ಒತ್ತಿ ಹೇಳಿದರು ಮತ್ತು ಜನರ ಸೇವೆಯನ್ನು ಮುಂದುವರಿಸಲು ಯಾವುದೇ ಚುನಾವಣೆಯಲ್ಲಿ ಗೆಲ್ಲುವ ಅಗತ್ಯವಿಲ್ಲ ಎಂದರು.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶರದ್ ಪವಾರ್ ಅವರು, ರಾಜ್ಯಸಭಾ ಸದಸ್ಯನಾಗಿ ಮುಂದುವರೆಯುವ ಆಸಕ್ತಿ ಇಲ್ಲ ಎಂದು ಒತ್ತಿ ಹೇಳಿದರು. "ನನ್ನ ಅವಧಿ ಇನ್ನೂ ಒಂದೂವರೆ ವರ್ಷ ಉಳಿದಿದೆ. ನಾನು ಈಗಾಗಲೇ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. ಇನ್ನೂ ಎಷ್ಟು ಚುನಾವಣೆಗಳಲ್ಲಿ ಸ್ಪರ್ಧಿಸಬೇಕು? ನಾನು ಈಗ ಹೊಸ ಪೀಳಿಗೆಗೆ ಅವಕಾಶ ನೀಡಬೇಕು ಎಂದು ಭಾವಿಸಿದ್ದೇನೆ ಎಂದರು.

“ನಾನು ಲೋಕಸಭೆ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಇಲ್ಲಿಯವರೆಗೆ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ ಮತ್ತು ಯಾವುದೇ ಚುನಾವಣೆಯಲ್ಲೂ ನೀವು ನನ್ನನ್ನು ಮನೆಗೆ ಹೋಗಲು ಬಿಡಲಿಲ್ಲ. ಪ್ರತಿ ಬಾರಿ ನೀವು ನನ್ನನ್ನು ಗೆಲ್ಲಿಸಿದ್ದೀರಿ. ಆದರೆ ಈಗ ಹೊಸ ಪೀಳಿಗೆಗೆ ಅವಕಾಶ ನೀಡಬೇಕು. ನನಗೆ ಅಧಿಕಾರ ಬೇಡ. ಆದರೆ ನಾನು ಜನರ ಸೇವೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

SCROLL FOR NEXT