ದೇಶ

ತಪ್ಪಿದ ಅನಾಹುತ: ತಾಂತ್ರಿಕ ದೋಷ; IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!

ಭಾರತೀಯ ವಾಯುಪಡೆಯ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಿದರು.

ಭಾರತೀಯ ವಾಯುಪಡೆಯ (IAF) ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜಸ್ಥಾನದ ನಾಗೌರ್‌ನ MARTA ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ ಜಾಸ್‌ನಗರದ ಹೊಲಗಳಲ್ಲಿ ಇಳಿದಿದ್ದು ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಜೋಧ್‌ಪುರದಿಂದ ಜೈಪುರಕ್ಕೆ ಹೋಗುತ್ತಿದ್ದಾಗ ಪೈಲಟ್‌ಗೆ ಕೆಲವು ಸಮಸ್ಯೆ ಕಾಣಿಸಿಕೊಂಡಿತು. ಇದರಿಂದಾಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಿತ್ತು. ಸಮಸ್ಯೆ ಸರಿಪಡಿಸಿದ ಬಳಿಕ ಮತ್ತೆ ಹೆಲಿಕಾಪ್ಟರ್ ಟೇಕಾಫ್ ಆಗುತ್ತಿದೆ ಎಂದು ಮೆರ್ಟಾ ಡಿಎಸ್ ಪಿ ರಾಮಕರನ್ ಮಲಿಂದಾ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಿದರು. ಇನ್ನು ಕಳೆದ ಸೋಮವಾರ ಬೆಳಗ್ಗೆ ವಾಯುಪಡೆಯ MiG-29 ಯುದ್ಧ ವಿಮಾನವು ದಿನನಿತ್ಯದ ತರಬೇತಿ ಹಾರಾಟದ ಸಮಯದಲ್ಲಿ ತಾಂತ್ರಿಕ ದೋಷದಿಂದ ಉತ್ತರ ಪ್ರದೇಶದ ಆಗ್ರಾ ಬಳಿಯ ಸುನೇಗಾ ಗ್ರಾಮದ ಹೊಲದಲ್ಲಿ ಪತನಗೊಂಡಿತು. ವಿಮಾನ ಪತನಗೊಳ್ಳುವ ಮುನ್ನ ಅದರ ಪೈಲಟ್ ಪ್ಯಾರಾಚೂಟ್ ಸಹಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದರು.

ಅಂದಿನ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಅಧಿಕಾರಿಗಳ ಪ್ರಕಾರ, ವಾಯುಪಡೆಯ ಸುರಕ್ಷತಾ ಆಡಿಟ್ ತಂಡವು ಅಪಘಾತ ಸಂಭವಿಸಿದ ಸ್ಥಳದಿಂದ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಂಪೂರ್ಣ ತನಿಖೆ ನಡೆಸಿತು. ತಂಡದಲ್ಲಿದ್ದ ಅಧಿಕಾರಿಗಳು ಅಪಘಾತವನ್ನು ಕಣ್ಣಾರೆ ಕಂಡವರ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ ಎಂದರು. ಅಧಿಕಾರಿಗಳ ಪ್ರಕಾರ, ತಂಡವು ವಿಮಾನದ ಬ್ಲ್ಯಾಕ್ ಬಾಕ್ಸ್ ಅನ್ನು ಪತ್ತೆಹಚ್ಚಿದೆ, ಅದನ್ನು ತನಿಖೆಗಾಗಿ ಕಳುಹಿಸಲಾಗಿದೆ. ಭದ್ರತಾ ಲೆಕ್ಕ ಪರಿಶೋಧನಾ ತಂಡ ದೆಹಲಿಗೆ ತೆರಳಿ ತನ್ನ ವರದಿಯನ್ನು ರಕ್ಷಣಾ ಸಚಿವಾಲಯಕ್ಕೆ ಸಲ್ಲಿಸಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT