ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ: 'ಐತಿಹಾಸಿಕ ಗೆಲುವು' ಸಾಧಿಸಿದ ಟ್ರಂಪ್‌ಗೆ ಪ್ರಧಾನಿ ಮೋದಿ ಅಭಿನಂದನೆ

ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು.

ಪ್ರಧಾನಿ ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್
Lingaraj Badiger
Updated On : 6 Nov 2024, 2:41 pm

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ.

'ನಿಮ್ಮ ಹಿಂದಿನ ಅವಧಿಯ ಯಶಸ್ಸಿನಂತೆಯೇ ಭಾರತ-ಅಮೆರಿಕ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಿಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

Advertisement

Advertisement

Also Read

US Elections 2024: 2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ, ಇದು ನಮ್ಮ ಅದ್ಭುತ ಜಯ ಎಂದ ಡೊನಾಲ್ಡ್ ಟ್ರಂಪ್

78 ವರ್ಷ ವಯಸ್ಸಿನ ಡೊನಾಲ್ಡ್ ಟ್ರಂಪ್ ಅವರು ಇಂದು ತಮ್ಮ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲೆಕ್ಟೋರಲ್ ಕಾಲೇಜ್ ಮತಗಳ ಎಣಿಕೆ ನಡೆಯುತ್ತಿದ್ದು, ಒಟ್ಟು 538 ಎಲೆಕ್ಟೋರಲ್ ಮತಗಳ ಪೈಕಿ ಬಹುತಮಕ್ಕೆ 270 ಮತಗಳ ಅಗತ್ಯವಿದೆ.

ಟ್ರಂಪ್ ಅವರು ಈಗಾಗಲೇ 270 ಮತಗಳನ್ನು ಪಡೆಯುವ ಮೂಲಕ ಮ್ಯಾಜಿಕ್ ನಂಬರ್ ತಲುಪಿದ್ದಾರೆ. ಇನ್ನು ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಕೂಡ ಸ್ಪರ್ಧೆಯಲ್ಲಿದ್ದು, ಇಲ್ಲಿಯವರೆಗೆ 224 ಮತಗಳನ್ನು ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments