ಶಾರದಾ ಸಿನ್ಹಾ  
ದೇಶ

ಜಾನಪದ ಗಾಯಕಿ -ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ: ಪಿಎಂ ಮೋದಿ ಸೇರಿದಂತೆ ಗಣ್ಯರ ಸಂತಾಪ

72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅಕ್ಟೋಬರ್ 25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನವದೆಹಲಿ: ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ಅವರು ಕ್ಯಾನ್ಸರ್‌ನಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.

72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅಕ್ಟೋಬರ್.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್. ಸಿನ್ಹಾ ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿತ್ತು.

‘ಕಾರ್ತಿಕ್ ಮಾಸ್ ಇಜೋ ರಿಯಾ’, ‘ಕೋಯಲ್ ಬಿನ್’ ತರಹದ ಜನಪದ ಗೀತೆಗಳು, ‘ಗ್ಯಾಂಗ್ಸ್‌ ಆಫ್ ವಸೇಪುರ್’ ಹಿಂದಿ ಸಿನಿಮಾದ ‘ತಾರ್‌ ಬಿಜಿಲಿ’, ‘ಹಮ್‌ ಆಪ್ಕೆ ಹೈ ಕೌನ್’ ಚಿತ್ರದ ‘ಬಾಬುಲ್’ ಹಾಡುಗಳ ಗಾಯನದಿಂದ ಶಾರದಾ ಅವರು ಛಾಪು ಮೂಡಿಸಿದ್ದರು. ಶಾರದಾ ಅವರನ್ನು ಅಭಿಮಾನಿಗಳು ‘ಬಿಹಾರಿ ಕೋಕಿಲಾ’ ಎಂದು ಕರೆಯುತ್ತಿದ್ದರು.

ಶಾರದಾ ಅವರು ಭೋಜಪುರಿ, ಮೈಥಿಲಿ ಭಾಷೆಯ ಜನಪದ ಗೀತೆಗಳನ್ನು ಹಾಡುತ್ತಿದ್ದರು. ಶಾರದಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ‘ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಹಾಡುಗಳು ಹಲವು ದಶಕಗಳಿಂದ ಜನಪ್ರಿಯವಾಗಿವೆ. ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT