ಸಲ್ಮಾನ್ ಖಾನ್  
ದೇಶ

ನಟ ಸಲ್ಮಾನ್ ಖಾನ್ ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತೊಂದು ಬೆದರಿಕೆ ಕರೆ: 5 ಕೋಟಿ ರು ಹಣಕ್ಕೆ ಬೇಡಿಕೆ

ಗುರುವಾರ ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಮತ್ತೊಮ್ಮೆ ಬೆದರಿಕೆ ಸಂದೇಶ ಬಂದಿದ್ದು 5 ಕೋಟಿರೂ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಗುರುವಾರ ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂದೇಶ ಕಳುಹಿಸಿದವರು ನಟನಿಗೆ ಬೆದರಿಕೆ ಹಾಕಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದು, ಇದನ್ನು ಬಿಷ್ಣೋಯ್ ಗ್ಯಾಂಗ್ ಪರವಾಗಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಇದಲ್ಲದೆ, ವ್ಯಕ್ತಿ 'ಮೈ ಸಿಕಂದರ್ ಹೂನ್' ಹಾಡಿನ ಗೀತರಚನೆಕಾರನಿಗೂ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂಚಾರಿ ಪೊಲೀಸರ ದೂರಿನ ಮೇರೆಗೆ ವರ್ಲಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ, ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ಸಲ್ಮಾನ್ ಖಾನ್‌ಗೆ ಹಲವು ಬೆದರಿಕೆ ಸಂದೇಶಗಳು ಬಂದಿವೆ. ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಖಾನ್ ಗೆ ಜೀವ ಬೆದರಿಕೆ ಇತ್ತು. ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ ಪ್ರಕರಣಗಳಲ್ಲಿ ಬಿಷ್ಣೋಯ್ ಅಹಮದಾಬಾದ್‌ನ ಸಾಬರಮತಿ ಜೈಲಿನಲ್ಲಿದ್ದರೆ, ಅವರ ತಂಡದ ಶಂಕಿತ ಸದಸ್ಯರು ಏಪ್ರಿಲ್‌ನಲ್ಲಿ ಸಲ್ಮಾನ್ ಖಾನ್ ಬಾಂದ್ರಾ ಮನೆಯ ಹೊರಗೆ ಗುಂಡು ಹಾರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT