ವಂಚಕ ಕಿರಣ್ ಪಟೇಲ್ 
ದೇಶ

ಪಿಎಂಒ ಅಧಿಕಾರಿಯಂತೆ ಪೋಸ್: 'ವಂಚಕ' ಕಿರಣ್ ಪಟೇಲ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

ನ್ಯಾಯಾಲಯವು ಪ್ರಾಸಿಕ್ಯೂಷನ್ ದೂರನ್ನು ಪರಿಗಣನೆಗೆ ತೆಗೆದುಕೊಂಡಿದ್ದು, ಆರೋಪಿಗೆ ನವೆಂಬರ್ 27 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಶ್ರೀನಗರ: ತಾನು ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗುಜರಾತ್‌ನ ಕಿರಣ್ ಪಟೇಲ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ.

ನ್ಯಾಯಾಲಯವು ಪ್ರಾಸಿಕ್ಯೂಷನ್ ದೂರನ್ನು ಪರಿಗಣನೆಗೆ ತೆಗೆದುಕೊಂಡಿದ್ದು, ಆರೋಪಿಗೆ ನವೆಂಬರ್ 27 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಶನಿವಾರ ಇಡಿ ತಿಳಿಸಿದೆ.

ಈ ಪ್ರಕರಣ ಸಂಬಂಧ ಬಂಧಿತರಾಗಿದ್ದ ಅಹಮದಾಬಾದ್ ನಿವಾಸಿ ಕಿರಣ್ ಪಟೇಲ್‌ ಅವರಿಗೆ ಕಳೆದ ವರ್ಷ ಆಗಸ್ಟ್ 29 ರಂದು ಇಲ್ಲಿನ ನ್ಯಾಯಾಲಯವು ಜಾಮೀನು ನೀಡಿತ್ತು. ಮಾರ್ಚ್‌ನಲ್ಲಿ ಜನರನ್ನು ವಂಚಿಸಲು ಮತ್ತು ಆಡಳಿತದಿಂದ ಅನಗತ್ಯ ಪ್ರಯೋಜನಗಳನ್ನು ಪಡೆಯಲು ತಾನು ಪ್ರಧಾನಿ ಕಚೇರಿಯಲ್ಲಿ(ಪಿಎಂಒ) ಉನ್ನತ ಅಧಿಕಾರಿ ಎಂದು ಹೇಳಿಕೊಂಡಿದ್ದರು.

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪಟೇಲ್ ಮತ್ತು ಇತರರ ವಿರುದ್ಧ ಶ್ರೀನಗರದ ನಿಶಾತ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು.

"ಪಟೇಲ್, ಒಬ್ಬ ವಂಚಕ. ತಾನು ಪ್ರಧಾನಿ ಕಚೇರಿಯ ಹೆಚ್ಚುವರಿ ನಿರ್ದೇಶಕ ಎಂದು ಸುಳ್ಳು ಹೇಳಿದ್ದಾನೆ ಮತ್ತು ಜನರನ್ನು ವಂಚಿಸಲು ಮತ್ತು ಸರ್ಕಾರಿ ಸೌಲಭ್ಯ, ಭದ್ರತೆ ಪಡೆಯಲು ನಕಲಿ ವಿಸಿಟಿಂಗ್ ಕಾರ್ಡ್‌ಗಳನ್ನು ಮೋಸದಿಂದ ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!