ಕಾಲುವೆ ನೀರಿನಲ್ಲೇ ಶವ ಸಾಗಾಟ 
ದೇಶ

ಕುತ್ತಿಗೆ ವರೆಗಿನ ನೀರಿನಲ್ಲೇ ಗ್ರಾಮಸ್ಥರಿಂದ ಶವ ಸಾಗಾಟ: ಸೇತುವೆ ನಿರ್ಮಾಣಕ್ಕೆ 20 ಲಕ್ಷ ರೂ ಕೊಟ್ಟ ಜಿಲ್ಲಾಧಿಕಾರಿ!

ಉತ್ತರ ರಾಜನ್‌ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದರೆ, ಈಜು ಬಲ್ಲವರು ಮಾತ್ರ ಮೃತದೇಹಗಳನ್ನು ಕೊಳ್ಳಿಡಾಂ ನದಿ ಪಾತ್ರದ ಸಮಾಧಿ ಸ್ಥಳಕ್ಕೆ ಕೊಂಡೊಯ್ಯಬಹುದು.

ಕಡಲೂರು: 92 ವರ್ಷದ ಮೃತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕಾಗಿ ತಮಿಳುನಾಡು ಗ್ರಾಮಸ್ಥರು ಕುತ್ತಿಗೆ ವರೆಗೆ ನೀರು ಹರಿಯುತ್ತಿರುವ ಕಾಲುವೆ ದಾಟುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾಧಿಕಾರಿ ಕಾಲುವೆ ಮೇಲೆ ಸೇತುವೆ ನಿರ್ಮಾಣಕ್ಕೆ ಹಣಕಾಸಿನ ನೆರವಿಗೆ ಮುಂದಾಗಿದ್ದಾರೆ.

ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್‌ನಾರ್‌ಕೋಯಿಲ್‌ ಬಳಿಯ ವೀರಸೋಜಪುರಂ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿ ಗ್ರಾಮದಿಂದ ಆಚೆ ಇರುವ ಕಾಲುವೆ ಬಳಿಕ ಸ್ಮಶಾನವಿದೆ.

ಹೀಗಾಗಿ ಗ್ರಾಮದಲ್ಲಿ ಯಾರೇ ಮರಣಹೊಂದಿದರೂ ಅವರ ದೇಹವನ್ನು ಈ ಕಾಲುವೆ ದಾಟಿಯೇ ಸ್ಮಶಾನಕ್ಕೆ ಸಾಗಿಸಬೇಕಾದ ಪರಿಸ್ಥಿತಿ ಇದೆ. ಇದೇ ರೀತಿ 92 ವರ್ಷದ ವೃದ್ಧರ ಮೃತದೇಹವನ್ನು ತುಂಬಿ ಹರಿಯುತ್ತಿರುವ ಕಾಲುವೆಯಲ್ಲಿಯೇ ಗ್ರಾಮಸ್ಥರು ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದರು. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.

ಈ ಗ್ರಾಮದಲ್ಲಿ 100ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. 'ಉತ್ತರ ರಾಜನ್‌ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದರೆ, ಈಜು ಬಲ್ಲವರು ಮಾತ್ರ ಮೃತದೇಹಗಳನ್ನು ಕೊಳ್ಳಿಡಾಂ ನದಿ ಪಾತ್ರದ ಸಮಾಧಿ ಸ್ಥಳಕ್ಕೆ ಕೊಂಡೊಯ್ಯಬಹುದು, ಇಲ್ಲಿ ಸೇತುವೆ ನಿರ್ಮಿಸುವಂತೆ ಹಲವು ವರ್ಷಗಳಿಂದ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕಡಲೂರು ಜಿಲ್ಲಾಧಿಕಾರಿ ಸಿಬಿ ಆದಿತ್ಯ ಸೆಂಥಿಲ್ ಕುಮಾರ್ ಅವರು ರಾಜನ್ ಕಾಲುವೆಗೆ ಪಾದಚಾರಿ ಸೇತುವೆ ನಿರ್ಮಿಸಲು 20 ಲಕ್ಷ ರೂ ಆರ್ಥಿಕ ನೆರವು ನೀಡಿದ್ದು, ಪ್ರಸ್ತುತ ಮುಂಗಾರು ಮಳೆಯಿಂದಾಗಿ ತಕ್ಷಣದ ಪರಿಹಾರವಾಗಿ ಈ ಪ್ರದೇಶದಲ್ಲಿ ತಾತ್ಕಾಲಿಕ ಸೇತುವೆಯನ್ನು ಶೀಘ್ರದಲ್ಲಿ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video