ಮಹಾರಾಷ್ಟ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ online desk
ದೇಶ

ಮಹಾರಾಷ್ಟ್ರ: ಬಿಜೆಪಿ ಪ್ರಣಾಳಿಕೆ ಭರವಸೆಗಳೇನು ಅಂದರೆ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈನಲ್ಲಿ 25 ಅಂಶಗಳ 'ಸಂಕಲ್ಪ ಪತ್ರ 2024' ನ್ನು ಅನಾವರಣಗೊಳಿಸಿದರು.

ಮುಂಬೈ: ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಾದ ನಿಬಂಧನೆಗಳೊಂದಿಗೆ ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದೆ ಮತ್ತು ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ತರಬೇತಿಗಾಗಿ ಕೌಶಲ್ಯ ಗಣತಿ ಮತ್ತು ಕಡಿಮೆ ಆದಾಯದ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ಹೇಳಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈನಲ್ಲಿ 25 ಅಂಶಗಳ 'ಸಂಕಲ್ಪ ಪತ್ರ 2024' ನ್ನು ಅನಾವರಣಗೊಳಿಸಿದರು. ಪ್ರಣಾಳಿಕೆಯ ಪ್ರಕಾರ ಮಹಿಳೆಯರಿಗೆ ಮಹಾಯುತಿ ಸರ್ಕಾರದ ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ ಹಣಕಾಸಿನ ನೆರವು ಘಟಕವನ್ನು ತಿಂಗಳಿಗೆ 1,500 ರೂ.ನಿಂದ 2,100 ರೂ.ಗೆ ಹೆಚ್ಚಿಸಲಾಗುವುದು ಎಂಬ ಭರವಸೆ ನೀಡಲಾಗಿದೆ.

ನವೆಂಬರ್ 20 ರ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 10 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 10,000 ರೂಪಾಯಿಗಳ ಸ್ಟೈಫಂಡ್ ನೀಡುವ ಭರವಸೆ ಇದೆ.

ಆಡಳಿತಾರೂಢ ಮಹಾಯುತಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವನ್ನು ಒಳಗೊಂಡಿದೆ.

ಬಲವಂತದ ಮತ್ತು ಮೋಸದ ಮತಾಂತರಗಳ ವಿರುದ್ಧ ಕಠಿಣ ಕ್ರಮಕ್ಕೆ ಅವಕಾಶ ಕಲ್ಪಿಸುವ ಮೂಲಕ ಮತಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಲಾಗುವುದು ಎಂದು ಬಿಜೆಪಿಯ ಪ್ರಣಾಳಿಕೆ ಭರವಸೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT