ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮುಂಬೈ ಹೋಟೆಲ್ ನಲ್ಲಿ ನಡೆಯುತ್ತಿದ್ದ ಅಮಿತ್ ಶಾ ಸಭೆಗೆ ನುಗ್ಗಿದ ವ್ಯಕ್ತಿಯ ಬಂಧನ

ಬಂಧಿತ ವ್ಯಕ್ತಿಯನ್ನು ಕಾನ್ಪುರದ ಶಕ್ತಿ ಪ್ರಕಾಶ್ ಭಾರ್ಗವ್ ಎಂದು ಗುರುತಿಸಲಾಗಿದೆ.

ಅಮಿತ್ ಶಾ — PTI
Lingaraj Badiger
Updated On : 11 Nov 2024, 9:00 pm

ಮುಂಬೈ: ಮುಂಬೈನ ಹೋಟೆಲ್‌ನಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಡೆಸುತ್ತಿದ್ದ ಸಭೆಗೆ ನುಗ್ಗಿದ ಆರೋಪದ ಮೇಲೆ 53 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಕಾನ್ಪುರದ ಶಕ್ತಿ ಪ್ರಕಾಶ್ ಭಾರ್ಗವ್ ಎಂದು ಗುರುತಿಸಲಾಗಿದೆ. ಭಾರ್ಗವ್ ಅವರು ಭಾನುವಾರ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಹೋಟೆಲ್‌ನಲ್ಲಿ ಹೆಚ್ಚಿನ ಭದ್ರತೆಯಲ್ಲಿ ನಡೆಯುತ್ತಿದ್ದ ಸಭೆಗೆ ಪ್ರವೇಶಿಸಲು ನಕಲಿ ಮಾಧ್ಯಮ ಐಡಿಯನ್ನು ಬಳಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಯ ಪ್ರಕಾರ, ಭಾರ್ಗವ್ ಅವರು "ಲಾಲ್ ಇಮ್ಲಿ ಮಿಲ್ ಹಗರಣ" ಎಂದು ಕೂಗುವ ಮೂಲಕ ಸಭೆಗೆ ಅಡ್ಡಿಪಡಿಸಿದರು ಮತ್ತು ಕೇಂದ್ರ ಗೃಹ ಸಚಿವರ ಗಮನ ಸೆಳೆಯುವ ಪ್ರಯತ್ನದಲ್ಲಿ ತಮ್ಮ ಕೈಯಲ್ಲಿದ್ದ ಪೇಪರ್ ಗಳನ್ನು ಎಸೆದರು.

Advertisement

Advertisement

Also Read

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ 'ಸಂಕಲ್ಪ ಪತ್ರ' ಬಿಡುಗಡೆ ಮಾಡಿದ ಅಮಿತ್ ಶಾ

ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ, ಭಾರ್ಗವ್ ಅವರನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದರು. ಅವರು ಮೊದಲು ಸ್ಥಳದಿಂದ ಹೊರಕ್ಕೆ ಕರೆದೊಯ್ದರು.

ಭಾರ್ಗವ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿಯಲ್ಲಿ ವಂಚನೆ ಮತ್ತು ಫೋರ್ಜರಿ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments