ಬಾಲಿವುಡ್ ನಟ ಶಾಹಿದ್ ಕಪೂರ್ 
ದೇಶ

ಮುಂಬೈನ ಅಪಾರ್ಟ್ಮೆಂಟ್ ತಿಂಗಳಿಗೆ 20 ಲಕ್ಷ ರೂ ಬಾಡಿಗೆಗೆ ನೀಡಿದ ನಟ ಶಾಹಿದ್ ಕಪೂರ್!

ಶಾಹಿದ್ ಕಪೂರ್ ಮತ್ತು ಮೀರಾ ಕಪೂರ್ ಅವರು ಕಳೆದ ಮೇ ನಲ್ಲಿ 58.6 ಕೋಟಿ ರೂಪಾಯಿಗೆ ಈ ಅಪಾರ್ಟ್ಮೆಂಟ್ ಅನ್ನು ಖರೀದಿಸಿದ್ದರು.

ಮುಂಬೈ: ಸ್ಕ್ವೇರ್ ಯಾರ್ಡ್ಸ್ ಪ್ರಕಾರ, ಬಾಲಿವುಡ್ ನಟ ಶಾಹಿದ್ ಕಪೂರ್ ಮತ್ತು ಅವರ ಪತ್ನಿ ಮುಂಬೈನ ತಮ್ಮ ಐಷಾರಾಮಿ ಅಪಾರ್ಟ್ಮೆಂಟ್ ಅನ್ನು ತಿಂಗಳಿಗೆ 20 ಲಕ್ಷ ರೂಪಾಯಿಗೆ ಬಾಡಿಗೆಗೆ ನೀಡಿದ್ದಾರೆ.

ಶಾಹಿದ್ ಕಪೂರ್ ಮತ್ತು ಮೀರಾ ಕಪೂರ್ ಅವರು ಕಳೆದ ಮೇ ನಲ್ಲಿ 58.6 ಕೋಟಿ ರೂಪಾಯಿಗೆ ಈ ಅಪಾರ್ಟ್ಮೆಂಟ್ ಅನ್ನು ಖರೀದಿಸಿದ್ದರು.

ಮಂಗಳವಾರದ ಪ್ರಕಟಣೆಯಲ್ಲಿ, ರಿಯಲ್ ಎಸ್ಟೇಟ್ ಕನ್ಸಲ್ಟೆಂಟ್ ಸ್ಕ್ವೇರ್ ಯಾರ್ಡ್ಸ್, ಶಾಹಿದ್ ಕಪೂರ್ ಅವರು ಇತ್ತೀಚೆಗೆ ವರ್ಲಿಯ 'ತ್ರೀ ಸಿಕ್ಸ್ಟಿ ವೆಸ್ಟ್' ನಲ್ಲಿರುವ ಐಷಾರಾಮಿ ಅಪಾರ್ಟ್ಮೆಂಟ್ ಅನ್ನು ಬಾಡಿಗೆಗೆ ನೀಡಿದೆ ಎಂದು ತಿಳಿಸಲಾಗಿದೆ.

ಆಸ್ತಿಯು 5,395 ಚದರ ಅಡಿ ಕಾರ್ಪೆಟ್ ಪ್ರದೇಶ ಮತ್ತು 6,175.42 ಚದರ ಅಡಿ ಬಿಲ್ಟ್-ಅಪ್ ಪ್ರದೇಶವನ್ನು ಹೊಂದಿದೆ. ಮೂರು ಮೀಸಲಾದ ಕಾರ್ ಪಾರ್ಕಿಂಗ್ ಸ್ಥಳಗಳನ್ನು ಹೊಂದಿದೆ.

ಒಬೆರಾಯ್ ರಿಯಾಲ್ಟಿ ಅಭಿವೃದ್ಧಿಪಡಿಸಿದ 'ತ್ರೀ ಸಿಕ್ಸ್ಟಿ ವೆಸ್ಟ್' ಯೋಜನೆಯು 1.58 ಎಕರೆಗಳಷ್ಟು ವಿಸ್ತಾರವಾದ ಒಂದು ಉನ್ನತ-ಮಟ್ಟದ ವಸತಿ ಯೋಜನೆಯಾಗಿದ್ದು, 4 ಮತ್ತು 5 BHK ರೆಡಿ-ಟು-ಮೂವ್-ಅಪಾರ್ಟ್‌ಮೆಂಟ್‌ಗಳನ್ನು ಮಾರಾಟ ಮಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ