ಅಪಘಾತಕ್ಕೀಡಾಗಿ ನಜ್ಜುಗುಜ್ಜಾದ ಕಾರು 
ದೇಶ

ಡೆಹ್ರಾಡೂನ್: ಟ್ರಕ್ ಗೆ ಕಾರು ಡಿಕ್ಕಿ, ಆರು ಮಂದಿ ದುರ್ಮರಣ, ಒಬ್ಬರಿಗೆ ಗಂಭೀರ ಗಾಯ!

ಮೃತರಲ್ಲಿ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಸೇರಿದ್ದಾರೆ. ಅವರೆಲ್ಲರೂ ಇಪ್ಪತ್ತರ ಹರೆಯದವರು ಎನ್ನಲಾಗಿದೆ.

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿನ ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಚೌಕ್ ಬಳಿ ಸೋಮವಾರ ತಡರಾತ್ರಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ದುರ್ಮರಣ ಹೊಂದಿದ್ದಾರೆ. ಮೃತರಲ್ಲಿ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಸೇರಿದ್ದಾರೆ. ಅವರೆಲ್ಲರೂ ಇಪ್ಪತ್ತರ ಹರೆಯದವರು ಎನ್ನಲಾಗಿದೆ.

ಘಟನೆ ಬಗ್ಗೆ ತಕ್ಷಣ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಳಗ್ಗೆ 2 ಗಂಟೆ ಸುಮಾರಿನಲ್ಲಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಸಿಲುಕಿದ್ದ ಏಳು ಮಂದಿಯನ್ನು ಆಸ್ಪತ್ರೆಗೆ ಸಾಗಿಸಿದ್ದೇವು. ಅವರಲ್ಲಿ ಆರು ಮಂದಿ ಮೃತಪಟ್ಟಿದ್ದು, ಓರ್ವ ಗಂಭೀರ ಪರಿಸ್ಥಿತಿಯಲ್ಲಿರುವುದಾಗಿ ವೈದ್ಯರು ಘೋಷಿಸಿದ್ದಾಗಿ ಕೊತ್ವಾಲಿ ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಏಳು ಯುವಕರಿದ್ದ ಇನ್ನೋವಾ ಕಾರು ಟ್ರಕ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡೆಹ್ರಾಡೂನ್ ನಿವಾಸಿ ಸಿದ್ಧೇಶ್ ಅಗರ್ವಾಲ್ (24) ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

'2ನೇ ಟೆಸ್ಟ್ ಪಂದ್ಯ ಕೂಡ ಶ್ರೀಲಂಕಾ ಕೈ ಜಾರಿ ಹೋಗಿದೆ': Harsha Bhogle ಹೇಳಿದ್ದೇನು?

MCAಗೆ FDA ಶಾಕ್: ಕ್ರಿಕೆಟ್ ಮಂಡಳಿಯ 5 ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು