ಸಾಂದರ್ಭಿಕ ಚಿತ್ರ 
ದೇಶ

ಸಿಐಎಸ್‌ಎಫ್‌ಗೆ ಮೊದಲ ಮಹಿಳಾ ಮೀಸಲು ಬೆಟಾಲಿಯನ್ ಮಂಜೂರು

ಹಿರಿಯ ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಒಟ್ಟು 1,025 ಸಿಬ್ಬಂದಿಗಳ ಬಲದೊಂದಿಗೆ ವಿಶೇಷ ಮಹಿಳಾ ಮೀಸಲು ಘಟಕವನ್ನು ಅನುಮೋದಿಸಿ ಕೇಂದ್ರ ಗೃಹ ಸಚಿವಾಲಯವು ಆದೇಶ ಹೊರಡಿಸಿದೆ.

ನವದೆಹಲಿ: ವಿಮಾನ ನಿಲ್ದಾಣಗಳು ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಸಿಬ್ಬಂದಿಯ ಕರ್ತವ್ಯ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 1,000 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಒಳಗೊಂಡಿರುವ ಮೊಟ್ಟಮೊದಲ ಎಲ್ಲಾ ಮಹಿಳಾ ಸಿಐಎಸ್ಎಫ್ ಮೀಸಲು ಬೆಟಾಲಿಯನ್ ಗೆ ಅನುಮೋದನೆ ನೀಡಿದೆ.

ಮಂಜೂರಾದ ಸುಮಾರು ಎರಡು ಲಕ್ಷ ಸಿಬ್ಬಂದಿಯಲ್ಲಿಯೇ ಮಹಿಳಾ ಮೀಸಲು ಬೆಟಾಲಿಯನ್ ರಚಿಸಲಾಗುವುದು ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಹಿರಿಯ ಕಮಾಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಒಟ್ಟು 1,025 ಸಿಬ್ಬಂದಿಗಳ ಬಲದೊಂದಿಗೆ ವಿಶೇಷ ಮಹಿಳಾ ಮೀಸಲು ಘಟಕವನ್ನು ಅನುಮೋದಿಸಿ ಕೇಂದ್ರ ಗೃಹ ಸಚಿವಾಲಯವು ಈ ವಾರ ಆದೇಶ ಹೊರಡಿಸಿದೆ ಎಂದು ಅವರು ಹೇಳಿದ್ದಾರೆ.

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(CISF) ಪ್ರಸ್ತುತ 12 ಮೀಸಲು ಬೆಟಾಲಿಯನ್‌ಗಳನ್ನು ಹೊಂದಿದೆ.

68 ನಾಗರಿಕ ವಿಮಾನ ನಿಲ್ದಾಣಗಳು, ದೆಹಲಿ ಮೆಟ್ರೋ ಮತ್ತು ತಾಜ್ ಮಹಲ್ ಹಾಗೂ ಕೆಂಪು ಕೋಟೆಯಂತಹ ಐತಿಹಾಸಿಕ ಸ್ಮಾರಕಗಳಂತಹ ಪ್ರಮುಖ ಸ್ಥಳಗಳಲ್ಲಿ CISF ದೊಡ್ಡ ಪ್ರಮಾಣದಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!