ಮಹಾರಾಷ್ಟ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ online desk
ದೇಶ

ಹೌದು, ಅಮಿತ್ ಶಾ, ಜೆಪಿ ನಡ್ಡಾ ಅವರ ಬ್ಯಾಗ್‌ಗಳನ್ನೂ ಪರಿಶೀಲಿಸಲಾಗಿದೆ: ಇಸಿ

ಹಿಂದಿನ ಚುನಾವಣೆಯಲ್ಲಿಯೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಪರಿಶೀಲಿಸಲಾಗಿದೆ.

ನವದೆಹಲಿ: ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಬ್ಯಾಗ್ ಅನ್ನು ಪರಿಶೀಲಿಸುವ ಚುನಾವಣಾ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿದ ಒಂದು ದಿನದ ನಂತರ, ಚುನಾವಣಾ ಆಯೋಗದ ಮೂಲಗಳು ಮಂಗಳವಾರ ಪ್ರಮಾಣಿತ ಕಾರ್ಯಾಚರಣೆಯ ಭಾಗವಾಗಿ(SOP) ರಾಜಕೀಯ ಉನ್ನತ ನಾಯಕರ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಪರಿಶೀಲಿಸಲಾಗುತ್ತದೆ ಎಂದು ಹೇಳಿವೆ.

ಹಿಂದಿನ ಚುನಾವಣೆಯಲ್ಲಿಯೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಪರಿಶೀಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

"ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಸಂಸ್ಥೆಗಳು ಕಟ್ಟುನಿಟ್ಟಾದ ಎಸ್‌ಒಪಿಗಳನ್ನು ಅನುಸರಿಸುತ್ತಿವೆ. 2024ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ, ಬಿಹಾರದಲ್ಲಿ ಇದೇ ರೀತಿಯ ಪ್ರಶ್ನೆಗಳನ್ನು ಎತ್ತಲಾಗಿತ್ತು ಮತ್ತು ಏಪ್ರಿಲ್‌ನಲ್ಲಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರ ಹೆಲಿಕಾಪ್ಟರ್‌ಗಳನ್ನು ಭಾಗಲ್ಪುರ ಜಿಲ್ಲೆಯಲ್ಲಿ ಪರಿಶೀಲಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆಯ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಎಲ್ಲಾ ರಾಜಕೀಯ ನಾಯಕರ ಹೆಲಿಕಾಪ್ಟರ್‌ಗಳನ್ನು ಪರಿಶೀಲಿಸುವುದನ್ನು ಖಚಿತಪಡಿಸಿಕೊಳ್ಳಲು ಜಾರಿ ಸಂಸ್ಥೆಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದ್ದರು.

ಉದ್ಧವ್ ಠಾಕ್ರೆ ಅವರು ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಹಾರಾಷ್ಟ್ರದ ಯವತ್ಮಾಲ್‌ಗೆ ಆಗಮಿಸಿದಾಗ ಚುನಾವಣಾ ಅಧಿಕಾರಿಗಳು ತಮ್ಮ ಬ್ಯಾಗ್ ಅನ್ನು ಪರಿಶೀಲಿಸಿದ್ದಾರೆ ಎಂದು ಸೋಮವಾರ ಹೇಳಿದ್ದರು. ಅಲ್ಲದೆ ಚುನಾವಣಾ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಿರಿಯ ನಾಯಕರ ಬ್ಯಾಗ್‌ಗಳನ್ನು ಸಹ ಪರಿಶೀಲಿಸುತ್ತಾರೆಯೇ? ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT