ದರ್ಭಾಂಗ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯವನ್ನು 'ಜಂಗಲ್ ರಾಜ್'ನಿಂದ ಹೊರ ತಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶ್ಲಾಘಿಸಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ದರ್ಭಾಂಗದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(AIIMS)ಗೆ ಅಡಿಗಲ್ಲು ಸಮಾರಂಭ ಮತ್ತು ಸುಮಾರು 12,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದರು.
"ಜಂಗಲ್ ರಾಜ್ ಯುಗದಿಂದ ರಾಜ್ಯವನ್ನು ಹೊರತರುವ ಮೂಲಕ ನಿತೀಶ್ ಕುಮಾರ್ ಅವರು ಉತ್ತಮ ಆಡಳಿತದ ಮಾದರಿಯನ್ನು ಸ್ಥಾಪಿಸಿದ್ದಾರೆ ಎಂದು ಜೆಡಿಯು ಮುಖ್ಯಸ್ಥರ ಸಮ್ಮುಖದಲ್ಲಿ ಪ್ರಧಾನಿ ಹೇಳಿದರು.
ಎನ್‌ಡಿಎ ಸರ್ಕಾರದ ಅಡಿಯಲ್ಲಿ ಬಿಹಾರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ, ವಿಶೇಷವಾಗಿ ಆರೋಗ್ಯ ಮೂಲಸೌಕರ್ಯದಲ್ಲಿ ಸುಧಾರಣೆಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದರು.
"ಬಿಹಾರ ಸಾಕಷ್ಟು ಅಭಿವೃದ್ಧಿಗೆ ಸಾಕ್ಷಿಯಾಗುತ್ತಿದೆ. ಎನ್‌ಡಿಎ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ. ಬಿಹಾರದ ಹಿಂದಿನ ಸರ್ಕಾರ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಎಂದೂ ತಲೆಕೆಡಿಸಿಕೊಂಡಿಲ್ಲ ಎಂದು ಟೀಕಿಸಿದರು.
ಹಿಂದೆ ಆಡಳಿತದಲ್ಲಿದ್ದ ಪಕ್ಷ ಕೇವಲ ಸುಳ್ಳು ಭರವಸೆಗಳನ್ನು ನೀಡಿತ್ತು. ಆದರೆ ನಿತೀಶ್ ಕುಮಾರ್ ಜಿ ಅಧಿಕಾರಕ್ಕೆ ಬಂದ ನಂತರ ಬಿಹಾರದ ಪರಿಸ್ಥಿತಿ ಸುಧಾರಿಸಿದೆ ಎಂದು ಮೋದಿ ಹೇಳಿದರು.