ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಟಿಎಂಸಿ ನಾಯಕನಿಗೆ ಗುಂಡಿಕ್ಕಿ ಹತ್ಯೆ

ಜಗತ್‌ದಲ್ ಪೊಲೀಸ್ ಠಾಣೆಯಿಂದ ಕೇವಲ ನೂರು ಮೀಟರ್ ದೂರದಲ್ಲಿರುವ ಟೀ ಸ್ಟಾಲ್‌ ಮುಂದೆ ನಿಂತಿದ್ದ ಟಿಎಂಸಿ ಮುಖಂಡ ಶಾ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ 24 ಪರಗಣ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಜಗತ್‌ದಲ್ ಪ್ರದೇಶದ ತೃಣಮೂಲ ಕಾಂಗ್ರೆಸ್ ನಾಯಕನನ್ನು ಬುಧವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ವ್ಯಕ್ತಿಯನ್ನು ಜಗತ್‌ದಲ್ ವಾರ್ಡ್ ನಂ 12 ರ ಟಿಎಂಸಿ ಮಾಜಿ ಅಧ್ಯಕ್ಷ ಅಶೋಕ್ ಶಾ ಎಂದು ಗುರುತಿಸಲಾಗಿದೆ.

ಜಗತ್‌ದಲ್ ಪೊಲೀಸ್ ಠಾಣೆಯಿಂದ ಕೇವಲ ನೂರು ಮೀಟರ್ ದೂರದಲ್ಲಿರುವ ಟೀ ಸ್ಟಾಲ್‌ ಮುಂದೆ ನಿಂತಿದ್ದ ಟಿಎಂಸಿ ಮುಖಂಡ ಶಾ ಮೇಲೆ ಬಾಂಬ್‌ ಎಸೆದ ದುಷ್ಕರ್ಮಿಗಳು, ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಶಾ ಅವರನ್ನು ತಕ್ಷಣ ಸಮೀಪದ ಭಟ್ಪರಾ ರಾಜ್ಯ ಜನರಲ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಸಾವನ್ನಪ್ಪಿದರು ಎಂದು ವೈದ್ಯರು ಘೋಷಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ