ಅಮಾನತುಲ್ಲಾ ಖಾನ್‌ 
ದೇಶ

ದೆಹಲಿ ವಕ್ಫ್ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ರಿಲೀಫ್; ನ್ಯಾಯಾಂಗ ಬಂಧನದಿಂದ ಬಿಡುಗಡೆಗೆ ಕೋರ್ಟ್ ಆದೇಶ

ಒಂದು ಲಕ್ಷ ರೂ. ಜಾಮೀನು ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಆಧಾರದ ಮೇಲೆ ಖಾನ್ ಅವರನ್ನು ತಕ್ಷಣವೇ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚನೆ..

ನವದೆಹಲಿ: ದೆಹಲಿ ವಕ್ಫ್‌ ಬೋರ್ಡ್‌ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶಿಸಿದ್ದು, ಅವರ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್‌ಶೀಟ್‌ನ ವಿಚಾರಣೆಗೆ ನಿರಾಕರಿಸಿದೆ.

ಖಾನ್ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಯಾವುದೇ ಅನುಮತಿ ನೀಡಲಾಗದು ಎಂದು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಹೇಳಿದರು.

ಒಂದು ಲಕ್ಷ ರೂ. ಜಾಮೀನು ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಆಧಾರದ ಮೇಲೆ ಖಾನ್ ಅವರನ್ನು ತಕ್ಷಣವೇ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ಅಮಾನತುಲ್ಲಾ ಖಾನ್ ಅವರು ದೆಹಲಿ ವಕ್ಫ್ ಬೋರ್ಡ್‌ನಲ್ಲಿ ಭ್ರಷ್ಟಾಚಾರದ ಮೂಲಕ ಗಳಿಸಿದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಕ್ಟೋಬರ್ 29 ರಂದು 110 ಪುಟಗಳ ಮೊದಲ ಪೂರಕ ಪ್ರಾಸಿಕ್ಯೂಷನ್ ದೂರನ್ನು (ಇಡಿ ಚಾರ್ಜ್‌ಶೀಟ್‌ಗೆ ಸಮನಾಗಿರುತ್ತದೆ) ಸಲ್ಲಿಸಿತ್ತು.

ಚಾರ್ಜ್‌ಶೀಟ್‌ನಲ್ಲಿ ಮರಿಯಮ್ ಸಿದ್ದಿಕಿ ಎಂಬುವರನ್ನು ಹೆಸರಿಸಲಾಗಿತ್ತು. ಅವರು ಪ್ರಕರಣದಲ್ಲಿ ಆರೋಪಿಯಾಗಿದ್ದರೂ ಇಡಿ ಅವರನ್ನು ಬಂಧಿಸಿಲ್ಲ. ಸಿದ್ದಿಕಿ ವಿರುದ್ಧ ಮುಂದುವರಿಯಲು ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಆಕೆಯನ್ನು ಬಿಡುಗಡೆ ಮಾಡಿದೆ. ಅಮಾನತುಲ್ಲಾ ಖಾನ್ ಅವರನ್ನು ಸೆಪ್ಟಂಬರ್ 2ರಂದು ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಇಡಿ ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್