ಸಂಗ್ರಹ ಚಿತ್ರ 
ದೇಶ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್: 15 ದಿನಗಳಲ್ಲಿ 11ನೇ ಬಾರಿ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ

ಭಯೋತ್ಪಾದಕರು ಮತ್ತು ಕಮಾಂಡೋ ಕೊಲ್ಲಲ್ಪಟ್ಟಿದ್ದಾರೆ. ಬುಧವಾರ ಕುಲ್ಗಾಮ್‌ನ ಬಡಿಮಾರ್ಗ್, ಯಾರಿಪೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಎನ್‌ಕೌಂಟರ್ ಆರಂಭವಾಗಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಸರಣಿ ಚಕಮಕಿಯಲ್ಲಿ, ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಎನ್‌ಕೌಂಟರ್ ನಡೆದಿದೆ. ಕಳೆದ ಹದಿನೈದು ದಿನಗಳಲ್ಲಿ ನಡೆದ 11 ನೇ ಎನ್‌ಕೌಂಟರ್ ಇದಾಗಿದೆ.

ಜಮ್ಮಕಾಶ್ಮೀರದ 20 ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಎನ್‌ಕೌಂಟರ್‌ಗಳು ನಡೆದಿದ್ದು,10 ಭಯೋತ್ಪಾದಕರು ಮತ್ತು ಕಮಾಂಡೋ ಕೊಲ್ಲಲ್ಪಟ್ಟಿದ್ದಾರೆ. ಬುಧವಾರ ಕುಲ್ಗಾಮ್‌ನ ಬಡಿಮಾರ್ಗ್, ಯಾರಿಪೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಎನ್‌ಕೌಂಟರ್ ಆರಂಭವಾಗಿದೆ. ಎರಡೂ ಕಡೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಕಾಶ್ಮೀರದಲ್ಲಿ ಮೊದಲ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದು ಒಮರ್ ಅಬ್ದುಲ್ಲಾ ನೇತೃತ್ವದ ಎನ್‌ಸಿ ಸರ್ಕಾರವು ಅಕ್ಟೋಬರ್ 16 ರಂದು ಪ್ರಮಾಣ ವಚನ ಸ್ವೀಕರಿಸಿದ ನಂತರ ಈ ಎನ್‌ಕೌಂಟರ್‌ಗಳು ಹೆಚ್ಚಾಗಿವೆ.

ಕಳೆದ 15 ದಿನಗಳಲ್ಲಿ ಕಣಿವೆ ರಾಜ್ಯಗಳು ಬಹುತೇಕ ದೈನಂದಿನ ಎನ್‌ಕೌಂಟರ್‌ಗಳಿಗೆ ಸಾಕ್ಷಿಯಾಗಿದೆ, ಕಳೆದ 15 ದಿನಗಳಲ್ಲಿ 11 ಘಟನೆಗಳು ನಡೆದಿವೆ. ಶ್ರೀನಗರ, ಜಮ್ಮು, ಕಿಶ್ತ್ವಾರ್, ಅನಂತನಾಗ್, ಕುಲ್ಗಾಮ್, ಬಾರಾಮುಲ್ಲಾ, ಕುಪ್ವಾರ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಎನ್‌ಕೌಂಟರ್‌ಗಳು ನಡೆದ ಎಂಟು ಜಿಲ್ಲೆಗಳಲ್ಲಿ ಆರು ಕಾಶ್ಮೀರದಲ್ಲಿ ಮತ್ತು ಎರಡು ಜಮ್ಮು ಪ್ರದೇಶದಲ್ಲಿವೆ. ನವೆಂಬರ್ 2 ರಂದು ಶ್ರೀನಗರದ ಖಾನ್ಯಾರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪ್ರಮುಖ ಲಷ್ಕರ್ ಭಯೋತ್ಪಾದಕ ಉಸ್ಮಾನ್ ಲಷ್ಕರಿ ಸಾವನ್ನಪ್ಪಿ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡರು.

ಎರಡು ವರ್ಷಗಳ ನಂತರ ಶ್ರೀನಗರದಲ್ಲಿ ನಡೆದ ಮೊದಲ ಎನ್‌ಕೌಂಟರ್ ಇದಾಗಿದೆ. ಶ್ರೀನಗರದ ಕೊನೆಯ ಗುಂಡಿನ ಚಕಮಕಿಯು ಸೆಪ್ಟೆಂಬರ್ 20, 2022 ರಂದು ನೌಗಾಮ್ ಪ್ರದೇಶದಲ್ಲಿ ನಡೆದಿತ್ತು. 11 ಎನ್‌ಕೌಂಟರ್‌ಗಳಲ್ಲಿ ಹತರಾದ ಹೆಚ್ಚಿನ ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಲಾಗಿದ್ದಾರೆ. ಎನ್‌ಕೌಂಟರ್‌ಗಳ ಹೆಚ್ಚುತ್ತಿರುವುದು ಕಾಶ್ಮೀರ ಮತ್ತು ಜಮ್ಮು ಪ್ರದೇಶಗಳೆರಡರಲ್ಲೂ ಭಯೋತ್ಪಾದಕರು ನುಸುಳಿದ್ದಾರೆ ಎಂದು ಸೂಚಿಸುತ್ತದೆ ಎಂದು ಮಾಜಿ ಜೆ & ಕೆ ಪೊಲೀಸ್ ಮುಖ್ಯಸ್ಥ ಎಸ್‌ಪಿ ವೈದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT