ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಬಸ್ತಾರ್‌ ಎನ್‌ಕೌಂಟರ್‌ನಲ್ಲಿ 5 ನಕ್ಸಲೀಯರು ಹತ

ಗಡಿ ಭದ್ರತಾ ಪಡೆ(ಬಿಎಸ್‌ಎಫ್), ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್(ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅವರು ತಿಳಿಸಿದ್ದಾರೆ.

ಬಸ್ತಾರ್: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಶನಿವಾರ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಉತ್ತರ ಅಬುಜ್ಮದ್‌ನ ಕಾಡಿನಲ್ಲಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಗಡಿ ಭದ್ರತಾ ಪಡೆ(ಬಿಎಸ್‌ಎಫ್), ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್(ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅವರು ತಿಳಿಸಿದ್ದಾರೆ.

ಸ್ಥಳದಿಂದ ಇದುವರೆಗೆ ಐವರು ನಕ್ಸಲೀಯರ ಮೃತದೇಹಗಳು ಮತ್ತು ಬಂದೂಕುಗಳ ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ರಾಜಧಾನಿ ರಾಯ್‌ಪುರಕ್ಕೆ ಸ್ಥಳಾಂತರಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video